ನಟ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ‘ಕೊತ್ತಲವಾಡಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದರು. ಈ ಚಿತ್ರದ ಮೂಲಕ ಅವರು ನಿರ್ಮಾಪಕಿ ಆಗಿದ್ದಾರೆ. ಈಗ ಪುಷ್ಪಾ ಅರುಣ್ ಕುಮಾರ್ ಅವರು ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. PA ಪ್ರೊಡಕ್ಷನ್ಸ್ ಮೂಲಕ ಅವರು ಸಿನಿಮಾ ಹಂಚಿಕೆ ಕೂಡ ಆರಂಭಿಸಿದ್ದಾರೆ. ಅದು ಮಹಿಳಾ ಪ್ರಧಾನ ಸಿನಿಮಾ ಮೂಲಕ ಅನ್ನೋದು ಮತ್ತೊಂದು ವಿಶೇಷ. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಚಿತ್ರವನ್ನು ಪುಷ್ಪಾ ಅವರು ಕನ್ನಡದಲ್ಲಿ ಹಂಚಿಕೆ ಮಾಡಲಿದ್ದಾರೆ.
ಪುಷ್ಪಾ ಅರುಣ್ ಕುಮಾರ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಸಂದರ್ಶನಗಳನ್ನು ನೀಡಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದಾರೆ. ಈಗ ಅವರು ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಸಿನಿಮಾ ಹಂಚಿಕೆ ಕೂಡ ಮಾಡುತ್ತಿದ್ದಾರೆ. PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇಡೀ ರಾಜ್ಯಾದ್ಯಂತ ‘ಘಾಟಿ’ ಸಿನಿಮಾ ಹಂಚಿಕೆ ಮಾಡುತ್ತಿದ್ದಾರೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಇದನ್ನು ರಿಲೀಸ್ ಮಾಡುವ ಆಲೋಚನೆ ಅವರಿಗೆ ಇದೆ.
ಈ ಬಗ್ಗೆ ಪುಷ್ಪಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಫಾಟಿ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು ಪಿಎ ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ’ ಎಂದು ಪುಷ್ಪಾ ಹೇಳಿದ್ದಾರೆ. ಅವರು ಹೊಸ ಹೆಜ್ಜೆ ಇಟ್ಟಿದ್ದಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ.
‘ಸಿನಿಮಾ ನಿರ್ಮಾಣಕ್ಕೆ ಬಂದಾಗ ಅನೇಕರು ಸಾಕಷ್ಟು ಪ್ರೀತಿ ತೋರಿಸಿದ್ದೀರಿ. ಅದೇ ಪ್ರೀತಿ ವಿತರಿಕಿಯಾದಾಗಲೂ ಇರಲಿ. ನಿಮ್ಮಲ್ಲೆ ಪ್ರೋತ್ಸಾಹ ಬೇಕು’ ಎಂದು ಪುಷ್ಪಾ ಅವರು ಹೇಳಿದ್ದಾರೆ. ಅವರು ಮೊದಲ ಹಂಚಿಕೆಯಲ್ಲಿ ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
‘ಘಾಟಿ’ ಸಿನಿಮಾ ತೆಲುಗು ಚಿತ್ರ. ಇದನ್ನು ಕ್ರಿಶ್ ಜಗರ್ಲಮುಡಿ ನಿರ್ದೇಶನ ಮಾಡುತ್ತಿದ್ದಾರೆ. ಅನುಷ್ಕಾ ಶೆಟ್ಟಿ, ವಿಕ್ರಮ್ ಪ್ರಭು ನಟಿಸುತ್ತಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 5ರಂದು ವಿಶ್ವಾದ್ಯಂತ ಬಿಡುಗಡೆ ಕಾಣಲಿದೆ. ಈ ಚಿತ್ರದ ಬಗ್ಗೆ ಅನುಷ್ಕಾ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
For More Updates Join our WhatsApp Group :