ಬೆಂಗಳೂರು: ಮಂಡ್ಯದ ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿ ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಅವರ ಮಾತಿನ ಪ್ರಕಾರ, “ಮಸೀದಿ ಕಡೆಯಿಂದ ಎರಡು ಕಲ್ಲುಗಳನ್ನು ಎಸೆಯಲಾಗಿದೆ ಎಂಬ ಮಾಹಿತಿ ಬಂದಿದೆ. ತಕ್ಷಣವೇ ಎಫ್‌ಐಆರ್ ದಾಖಲಿಸಿ 21 ಮಂದಿಯನ್ನು ಬಂಧಿಸಲಾಗಿದೆ. ಹಿಂದೂಗಳ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ, ಯಾರನ್ನೂ ಬಂಧಿಸಿಲ್ಲ” ಎಂದು ಸ್ಪಷ್ಟಪಡಿಸಿದರು.
ಸಚಿವರು ಮುಂದುವರಿದು, “ಬಹುಶಃ ಇಷ್ಟು ಶೀಘ್ರ ಕ್ರಮ ಯಾವ ಪ್ರಕರಣದಲ್ಲೂ ಆಗಿಲ್ಲ. ಕ್ರಮ ಕೈಗೊಂಡ ನಂತರವೂ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಲಾಭಕ್ಕಾಗಿ ಪ್ರತಿಭಟನೆಯ ಹೆಸರಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡಲು ಯತ್ನಿಸುತ್ತಿವೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.
ಅವರ ಅಭಿಪ್ರಾಯದಲ್ಲಿ, ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಪ್ರತಿಪಕ್ಷಗಳನ್ನು ಒತ್ತಡಕ್ಕೆ ತಳ್ಳಿವೆ. “ವಿಧಾನಸಭೆಯಲ್ಲಿ ವಿಫಲರಾದ ವಿರೋಧ ಪಕ್ಷಗಳು ಈಗ ಕೋಮು ವಿಚಾರಗಳನ್ನು ಮಾತ್ರ ಹಿಡಿದುಕೊಳ್ಳುತ್ತಿದ್ದಾರೆ. ಜನಪರ ವಿಚಾರಗಳಲ್ಲಿ ಹೋರಾಡುವ ಬದಲು ಗಲಭೆ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರಿನ ಕಲ್ಲು ತೂರಾಟದಲ್ಲಿ ಒಟ್ಟು 8 ಮಂದಿ ಗಾಯಗೊಂಡಿದ್ದು, ಸೋಮವಾರ ಬೆಳಗಿನ ಪ್ರತಿಭಟನೆಯಲ್ಲಿಯೂ ಮತ್ತೆ ಗಲಭೆ ನಡೆದಿದೆ. ಸದ್ಯ ಪರಿಸ್ಥಿತಿ ಉದ್ವಿಗ್ನವಾಗಿರುವ ಕಾರಣ, ಮಂಗಳವಾರ ಬೆಳಗ್ಗೆವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
For More Updates Join our WhatsApp Group :