ಕಲಬುರಗಿಯ ಚಿಂಚನಸೂರಿನಲ್ಲಿ ಭೂಕಂಪ! 2.3 ತೀವ್ರತೆ ದಾಖಲಾದ ಬೆಚ್ಚಿ ಬಿದ್ದ ಗ್ರಾಮಸ್ಥರು.

ಕಲಬುರಗಿಯ ಚಿಂಚನಸೂರಿನಲ್ಲಿ ಭೂಕಂಪ! 2.3 ತೀವ್ರತೆ ದಾಖಲಾದ ಬೆಚ್ಚಿ ಬಿದ್ದ ಗ್ರಾಮಸ್ಥರು.

ಕಲಬುರಗಿ: ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಘಟನೆ ಸಂಭವಿಸಿದೆ. ಬೆಳಿಗ್ಗೆ 8.17ರ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಇದು ಸಣ್ಣ ಪ್ರಮಾಣದ ಭೂಕಂಪವಾಗಿದ್ದು ಯಾವುದೇ ಅಪಾಯವಿಲ್ಲ ಎಂದು ಭರವಸೆ ನೀಡಿದರು.

ಅಚಾನಕ್ಕಾಗಿ ಭೂಮಿ ಕಂಪಿಸಿದ ಅನುಭವ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದರೂ, ಅಧಿಕಾರಿಗಳು ಯಾವುದೇ ಹಾನಿ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *