ಬೆಂಗಳೂರು: 2025-26ನೇ ಸಾಲಿನ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 198 ಅಂಕ ಮತ್ತು SSLCಯಲ್ಲಿ 625ಕ್ಕೆ ಕನಿಷ್ಠ 206 ಅಂಕ ಗಳಿಸಿದರೆ ವಿದ್ಯಾರ್ಥಿಗಳು ಇನ್ನು ತೇರ್ಗಡೆ ಆಗಲಿದ್ದಾರೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹೊಸ ನಿಯಮದ ಪ್ರಕಾರ ಲಿಖಿತ ಹಾಗೂ ಆಂತರಿಕ ಅಂಕ ಸೇರಿ ಪಿಯುಸಿಯಲ್ಲಿ ಪ್ರತಿ ವಿಷಯದಲ್ಲೂ ಕನಿಷ್ಠ 30 ಅಂಕ ಕಡ್ಡಾಯವಾಗಿರಲಿದೆ. SSLC ಪರೀಕ್ಷೆಯಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 30 ಅಂಕ ಪಡೆದರೆ ವಿದ್ಯಾರ್ಥಿಗಳು ತೇರ್ಗಡ ಆಗಲಿದ್ದಾರೆ.
ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರವಾಗಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆ ಪೈಕಿ ಶೇಕಡಾ 33ರಷ್ಟು ಪರವಾಗಿ 701 ಪತ್ರ ಮತ್ತು ಶೇ.35ರಷ್ಟು ಪರವಾಗಿ 8 ಪತ್ರಗಳು ಬಂದಿದ್ದವು. ಹೀಗಾಗಿ 2025-26ನೇ ಸಾಲಿನಿಂದ SSLCಯಲ್ಲಿ ಪ್ರಥಮ ಭಾಷೆ ಹೊರತುಪಡಿಸಿ ಶೇ. 33 ಫಲಿತಾಂಶ ಬಂದರೆ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ. ಪ್ರಥಮ ಭಾಷೆ ಗರಿಷ್ಠ ಅಂಕವನ್ನು 125ರಿಂದ 100ಕ್ಕೆ ಇಳಿಸುವ ವಿಚಾರದ ಬಗ್ಗೆಯೂ ಚರ್ಚೆಯಾಗಿದ್ದು, ಇದು ಇನ್ನೂ ಅಂತಿಮವಾಗಿಲ್ಲ. ಸಾರ್ವಜನಿಕರ ಅಭಿಪ್ರಾಯ ಪಡೆದೇ ಈ ಬಗ್ಗೆ ತೀರ್ಮಾನಿಸಲಾಗುತ್ತೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಈ ನೂತನ ನಿಯಮವು ಜಾರಿಗೆ ಬರಲಿದ್ದು, ಪರೀಕ್ಷೆಗೆ ಹಾಜರಾಗುವ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾಥಿಗಳಿಬ್ಬರಿಗೂ ಅನ್ವಯವಾಗಲಿದೆ. ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್ ಸಿ ಹಾಗೂ ನೆರೆ ರಾಜ್ಯಗಳಲ್ಲಿರುವ ಮಾನದಂಡಗಳನ್ನು ನಮ್ಮಲ್ಲೂ ಜಾರಿಗೆ ತರುವ ಉದ್ದೇಶದ ಹಿನ್ನಲೆ ಈ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಹೊಸ ನಿಯಮದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಮತ್ತು SSLC ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
For More Updates Join our WhatsApp Group :




