ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡ ಜಿಲ್ಲೆಗಳಾದಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಪ್ರದೇಶಗಳಾದ ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶೇ.80ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 22-26 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
For More Updates Join our WhatsApp Group :
