“ಸಂಬಳಕ್ಕಾಗಿ ಕೇಳಿದ್ದೇ ಅಪರಾಧವಾಗಿತ್ತೆ?” – ಗ್ರಾ.ಪಂ ಕಚೇರಿ ಎದುರು ವಾಟರ್​ಮ್ಯಾನ್ ಆತ್ಮ*ತ್ಯೆ.

"ಸಂಬಳಕ್ಕಾಗಿ ಕೇಳಿದ್ದೇ ಅಪರಾಧವಾಗಿತ್ತೆ?" – ಗ್ರಾ.ಪಂ ಕಚೇರಿ ಎದುರು ವಾಟರ್​ಮ್ಯಾನ್ ಆತ್ಮ*ತ್ಯೆ.

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಸಂಬಳ ನೀಡಿಲ್ಲವೆಂದು ಮನನೊಂದ ವಾಟರ್​ಮ್ಯಾನ್ ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಪಿಡಿಓಗಳಿಬ್ಬರ ಬಳಿಯೂ ವೇತನದ ಬೇಡಿಕೆಯಿಟ್ಟಾಗ ಗದರಿಸಿ ಕಳುಹಿಸುತ್ತಿದ್ದರೇ ಹೊರತು ವೇತನ ನೀಡುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ವಾಟರ್​ಮ್ಯಾನ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ವರ್ಷಗಳಿಂದ ಸಂಬಳ ಕೊಡದೆ ಕಾಡಿಸುತ್ತಿದ್ದ ಗ್ರಾ.ಪಂ ಅಧ್ಯಕ್ಷೆ ಮತ್ತು ಪಿಡಿಓ

ಇಂದು ಬೆಳಿಗ್ಗೆ ಹೊಂಗನೂರು ಗ್ರಾಮಸ್ಥರು ಗ್ರಾಮ ಪಂಚಾಯಿತಿಯ ಬಳಿ ಬಂದಾಗ ವಾಟರ್​ಮ್ಯಾನ್ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಸು ನಾಯಕ (65) ಮೃತ ದುರ್ದೈವಿ. ಕಳೆದ 27 ತಿಂಗಳುಗಳಿಂದ ಸಂಬಳ ಸಿಗದೆ ಚಿಕ್ಕಸು ಬೇಸತ್ತು ಹೋಗಿದ್ದರು. ಚಿಕ್ಕಸುವಿಗೆ ಮಕ್ಕಳಿದ್ದರೂ  ಅವರಿಂದ ಆರ್ಥಿಕ ನೆರವೇನೂ ಸಿಗುತ್ತಿರಲಿಲ್ಲ. ಹೀಗಾಗಿ ತಮ್ಮ ಹೊಟ್ಟೆ ಪಾಡಿನ ಸಲುವಾಗಿ ಈ ಕೆಲಸ ಮಾಡಿಕೊಂಡಿದ್ದರು. ತಿಂಗಳ ಸಂಬಳ ಕೇವಲ 5 ಸಾವಿರ ರೂ.ಗಳಾದರೂ ಅದನ್ನು ಪಡೆಯಲೂ ಕಳೆದ 2 ವರ್ಷಗಳಿಂದ ಹರಸಾಹಸ ಮಾಡುವ ಪರಿಸ್ಥಿತಿ ಎದುರಾಗಿತ್ತು.

ಕಚೇರಿಯ ಬಾಗಿಲ ಮುಂದೆಯೇ ನೇಣಿಗೆ ಶರಣು

ಅನಾರೋಗ್ಯದಿಂದ ಬಳಲುತ್ತಿದ್ದ ಚಕ್ಕಸು, ಸಂಬಳಕ್ಕಾಗಿ ಎಷ್ಟೇ ಮನವಿ ಮಾಡಿಕೊಂಡಿದ್ದರೂ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರೂಪಾ ಮತ್ತು ಪಿಡಿಓ ರಾಮೇಗೌಡ ಚಿಕ್ಕಸು ಅವರನ್ನು  ಗದರಿಸಿ ಕಳುಹಿಸುತ್ತಿದ್ದರು. ಇದರಿಂದ ಬೇಸತ್ತ ವಾಟರ್​ಮ್ಯಾನ್ ಚಿಕ್ಕಸು ಡೆತ್ ನೋಟ್ ಬರೆದಿಟ್ಟು, ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಮುಂದೆಯೇ ನೇಣು ಬಿಗಿಕೊಂಡು ಸಾವನ್ನಪ್ಪಿದ್ದಾರೆ. ಈ ಕುರಿತು ಚಾಮರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *