ಪಾಟ್ನಾ: ದರೋಡೆಕೋರ ಮೊಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಒಸಾಮಾ ಶಹಾಬ್ ಅವರಿಗೆ ಟಿಕೆಟ್ ನೀಡಿದ್ದಕ್ಕಾಗಿ ವಿರೋಧ ಪಕ್ಷದ ಆರ್ಜೆಡಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ. ಇಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಬಿಹಾರದ ಜನರಿಗೆ ಭದ್ರತೆ ಹೇಗಿರುತ್ತದೆ? ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ. ಚುನಾವಣೆ ನಡೆಯಲಿರುವ ಬಿಹಾರದ ಸರನ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎನ್ಡಿಎ 20 ವರ್ಷಗಳಲ್ಲಿಯೇ ಅತಿ ದೊಡ್ಡ ಬಹುಮತದೊಂದಿಗೆ ಬಿಹಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಹಾರದ ಸಿವಾನ್ ಜಿಲ್ಲೆಯ ರಘುನಾಥಪುರ ವಿಧಾನಸಭಾ ಕ್ಷೇತ್ರದಿಂದ ಆರ್ಜೆಡಿ ಶಹಾಬ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
For More Updates Join our WhatsApp Group :

