ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಯ ಬೆನ್ನಲ್ಲೇ, ಇದೀಗ ಶಾಸಕ ರಂಗನಾಥ್ ಕೂಡ ಡಿಕೆಶಿ ಪರವಾಗಿ ಧ್ವನಿ ಎತ್ತಿದ್ದಾರೆ.
ರಂಗನಾಥ್ ಅವರು ಮಾತನಾಡುತ್ತಾ, “ಡಿ.ಕೆ. ಶಿವಕುಮಾರ್ ಯಾವುದೇ ಒಂದು ಸಮುದಾಯದ ಪರವಾಗಿ ನಿಲ್ಲದೇ, ಎಲ್ಲಾ ವರ್ಗಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವ ನಾಯಕತ್ವ ತೋರಿಸುತ್ತಿದ್ದಾರೆ. ಅವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಕಾಂಗ್ರೆಸ್ನ ಜಾತ್ಯತೀತ ತತ್ವಗಳನ್ನು ಪ್ರತಿಪಾದಿಸುವಲ್ಲಿ ಬದ್ಧರು” ಎಂದು ತಿಳಿಸಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಅವರು ಸತೀಶ್ ಜಾರಕಿಹೊಳಿ ಅವರನ್ನು ಸಿಎಂ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಹೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ರಂಗನಾಥ್, “ಆ ವಿಷಯದಲ್ಲಿ ನಾನು ಮಾತನಾಡುವುದಿಲ್ಲ. ಆದರೆ ಡಿಕೆಶಿ ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗಬೇಕು ಎಂದು ನನ್ನ ನಂಬಿಕೆ” ಎಂದರು.ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಮತ್ತು ಶಾಸಕರಿಗೆ ಸೇರಿದೆ ಎಂದು ಅವರು ಸ್ಪಷ್ಟಪಡಿಸಿದರು.
For More Updates Join our WhatsApp Group :
