ಈ ವರ್ಷದ ಬ್ಲಾಕ್ ಬಸ್ಟರ್ ಸಿನಿಮಾಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಒಟಿಟಿಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ. ಈಗಾಗಲೇ ಚಿತ್ರಮಂದಿರದಲ್ಲಿ ಎಂಜಾಯ್ ಮಾಡಿರುವ ಪ್ರೇಕ್ಷಕರು ಮತ್ತೊಮ್ಮೆ ಮನೆಯಲ್ಲೇ ಕುಳಿತು ಸಿನಿಮಾ ನೋಡಲು ಬಯಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ತಿಳಿಯಲು ಕಾದಿದ್ದ ಎಲ್ಲರಿಗೂ ಈಗ ಗುಡ್ ನ್ಯೂಸ್ ಸಿಕ್ಕಿದೆ. ಅಕ್ಟೋಬರ್ 31ರಂದು ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಆಗಲಿದೆ. ಈ ಬಗ್ಗೆ ‘ಅಮೇಜಾನ್ ಪ್ರೈಂ ವಿಡಿಯೋ’ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರೇ ಮುಖ್ಯ ಪಾತ್ರದಲ್ಲೂ ಅಭಿನಯಿಸಿದ್ದಾರೆ. 2022ರಲ್ಲಿ ತೆರೆಕಂಡ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಂದಿದೆ. ರುಕ್ಮಿಣಿ ವಸಂತ್ ಅವರು ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.
‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ನಿರ್ಮಾಣ ಮಾಡಿದೆ. ಭಾರಿ ಬಜೆಟ್ನಲ್ಲಿ ಸಿದ್ಧವಾದ ಈ ಸಿನಿಮಾ ಉತ್ತಮವಾಗಿ ಕಲೆಕ್ಷನ್ ಮಾಡಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ 800 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಇಂದಿಗೂ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಹಾಗಿರುವಾಗಲೇ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ.
For More Updates Join our WhatsApp Group :
