NDA ಪ್ರಣಾಳಿಕೆ ಬಿಡುಗಡೆ — ಉಚಿತ ವಿದ್ಯುತ್, ಮೆಟ್ರೋ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಭರವಸೆಗಳು!

NDA ಪ್ರಣಾಳಿಕೆ ಬಿಡುಗಡೆ — ಉಚಿತ ವಿದ್ಯುತ್, ಮೆಟ್ರೋ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಭರವಸೆಗಳು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ.

ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.

ಮಿಷನ್ ಕರೋಡಪತಿ ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ಸಹಾಯ ಮಾಡಲಾಗುತ್ತದೆ, ಬಿಹಾರದ 4 ಹೊಸ ನಗರಗಳಲ್ಲಿ ಮೆಟ್ರೋ ಸೇವೆ ಆರಂಭಿಸಲಾಗುವುದು, ಬಡ ಕುಟುಂಬಗಳಿಗೆ ‘ಪಂಚಾಮೃತ ಗ್ಯಾರಂಟಿ’ ಯೋಜನೆ ಜಾರಿ ಭರವಸೆ, ಬಿಹಾರದಲ್ಲಿ 7 ಎಕ್ಸ್​ಪ್ರೆಸ್​ ಹೆದ್ದಾರಿಗಳನ್ನು ನಿರ್ಮಿಸುವ ಭರವಸೆ, ಬಡ ಕುಟುಂಬಕ್ಕೆ 125 ಯೂನಿಟ್​ ಉಚಿತ ವಿದ್ಯುತ್ ಭರವಸೆ, 3600 ಕಿ.ಮೀ. ರೈಲ್ವೆ ಮಾರ್ಗ ಆಧುನೀಕರಣಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಜನರಿಗೆ ನೀಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *