ಕಲಬುರಗಿ: ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 10.05ರ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ. ವಿಜಯಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಲ್ಲಿ ಒಟ್ಟು 12 ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಪದೇಪದೇ ಸಂಭವಿಸುತ್ತಿರುವ ಭೂಕಂಪನದಿಂದಾಗಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ವಿಜಯಪುರದ ಜೊತೆಗೆ ಕಲಬುರಗಿ ಜಿಲ್ಲೆಯಲ್ಲೂ ಭೂಮಿ ಕಂಪಿಸಿದೆ. ಕಲಬುರಗಿಯ ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಪಟವಾದ ಗ್ರಾಮಗಳಲ್ಲಿ ಭೂಕಂಪನ ಸಂಭವಿಸಿದೆ. ಕಲಬುರಗಿಯಲ್ಲಿ ಒಂದೇ ದಿನದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾತ್ರಿ ಸಮಯದಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಯಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಭೂಮಿ ನಡುಗಿದ್ದು, ಜನರು ಏನಾಯ್ತೋ ಏನೋ ಎಂಬ ಭೀತಿಯಲ್ಲಿ ಹೊರಗೆ ಸೇರಿದ್ದರು.
For More Updates Join our WhatsApp Group :



