ಮತ್ತೆ ಚಿಕ್ಕಮಗಳೂರಿನ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ.

ಮತ್ತೆ ಚಿಕ್ಕಮಗಳೂರಿನ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ.

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಆವರಣದಲ್ಲಿ ಮತ್ತೆ ವಿವಾದ ಎದ್ದಿದೆ. ನಿಷೇಧಿತ ಹೋಮ ಮಂಟಪದ ಪಕ್ಕದಲ್ಲೇ ಮುಸ್ಲಿಂ ಕುಟುಂಬ ಮಾಂಸಾಹಾರ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜಿಲ್ಲಾಡಳಿತ ಈ ವಿವಾದಿತ ಪ್ರದೇಶದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆಗೆ ಪೂರ್ವದಲ್ಲೇ ನಿಷೇಧ ಹೇರಿತ್ತು. ಆದರೂ ನಿಯಮ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡಿದ ಈ ದೃಶ್ಯಗಳು ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಅಧಿಕಾರಿಗಳು ವಿಷಯವನ್ನು ಪರಿಶೀಲಿಸುತ್ತಿದ್ದಾರೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿಸಲಾಗಿದೆ.

ಈ ಹಿಂದೆಯೂ ಹಲವು ವಿವಾದಕ್ಕೆ ಸಿಲುಕಿದ್ದ ಬಾಬಾ ಬುಡನ್​ ಸ್ವಾಮಿ ದರ್ಗಾ

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ಹಲವು ಬಾರಿ ಕೇಳಿ ಬಂದಿತ್ತು. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಾಗಿದ್ದು, ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. 2022 ರಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರ ನಮ್ಮದು ಎಂದು ಎರಡೂ ಧರ್ಮದವರ ಮಧ್ಯೆ ವಿವಾದ ಸೃಷ್ಟಿಯಾಗಿತ್ತು.

ಹಾಗೆಯೇ 2025ರ ಆಗಸ್ಟ್ ಅಲ್ಲಿ ದತ್ತಪೀಠದಲ್ಲಿ ನಕಲಿ ಗೋರಿ ನಿರ್ಮಿಸಲಾಗಿದೆ ಎಂಬ ಆರೋಪ ಈ ಹಿಂದೆ ಕೇಳಿ ಬಂದಿತ್ತು. ಈ ಬಗ್ಗೆ ಸತ್ಯ ತಿಳಿಯಲು ಎಸ್​ಐಟಿ ರಚನೆ ಮಾಡಿ, ಜಿಪಿಎಸ್​ ಆಧುನಿಕ ತಂತ್ರಜ್ಞಾನ ಬಳಸಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಮನವಿಯನ್ನು ಸಹ ಮಾಡಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *