ಭಾರತ ತಂಡವು 52 ವರ್ಷಗಳ ಬಳಿಕ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರ್ತಿ ಪ್ರತಿಕಾ ರಾವಲ್ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ವೀಲ್ ಚೇರ್ನಲ್ಲಿ ಆಗಮಿಸುವ ಮೂಲಕ..!
ಪ್ರತಿಕಾ ರಾವಲ್ ಈ ಬಾರಿಯ ಭಾರತ ತಂಡದ ಭಾಗವಾಗಿದ್ದರು. ಅಲ್ಲದೆ ಮೊದಲ 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಆದರೆ ಬಾಂಗ್ಲಾದೇಶ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಪ್ರತಿಕಾ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದಿಂದ ಹೊರಗುಳಿದಿದ್ದರು.
ಆದರೆ ಫೈನಲ್ ಪಂದ್ಯಕ್ಕೂ ಮುನ್ನ ವೈದ್ಯಕೀಯ ಚಿಕಿತ್ಸೆ ಪಡೆದಿದ್ದ ಪ್ರತಿಕಾ ರಾವಲ್ ವೀಲ್ ಚೇರ್ನೊಂದಿಗೆ ಆಗಮಿಸಿ ಅಂತಿಮ ಪಂದ್ಯವನ್ನು ವೀಕ್ಷಿಸಿದ್ದರು. ಅಲ್ಲದೆ ಟೀಮ್ ಇಂಡಿಯಾ ವಿಜಯೋತ್ಸವದಲ್ಲಿ ಭಾಗಿಯಾಗುವ ಮೂಲಕ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು.
ಇದೀಗ ಪ್ರತಿಕಾ ರಾವಲ್ ಅವರ ಡ್ಯಾನ್ಸಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಅಂದಹಾಗೆ ಈ ಬಾರಿಯ ವಿಶ್ವಕಪ್ನಲ್ಲಿ 6 ಇನಿಂಗ್ಸ್ಗಳಲ್ಲಿ ಆರಂಭಿಕಳಾಗಿ ಕಣಕ್ಕಿಳಿದಿದ್ದ ಪ್ರತಿಕಾ ರಾವಲ್ ಒಟ್ಟು 308 ರನ್ಗಳಿಸಿ ಟೀಮ್ ಇಂಡಿಯಾ ಸೆಮಿಫೈನಲ್ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಅದೇ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿ ಹೊಸ ಇತಿಹಾಸ ನಿರ್ಮಿಸಿದೆ.
For More Updates Join our WhatsApp Group :
