ಹಾವೇರಿ: ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ ಮಾತನಾಡಿದ್ದಾರೆ. ನಿರ್ಣಾಯಕ ಹಂತಕ್ಕೆ ಬಂದಿದೆ.
ಇವತ್ತು ಸಂಜೆ ಗೊತ್ತಾಗಲಿದೆ. ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಅದರೂ ಕೂಡಾ ಯಾವ ಕಾರ್ಖಾನೆಯಲ್ಲಿ ರಿಕವರಿ ಹೆಚ್ಚಿದೆ ಅಲ್ಲಿ ರೈತರಿಗೆ ಹೆಚ್ಚಿಗೆ ಕೊಡಿಸಲು ಪ್ರಯತ್ನ ಮಾಡಿದ್ದೇವೆ. 3200 ರುಪಾಯಿ ದರ ಕೊಡಲು ಒಪ್ಪಿಕೊಂಡಿದ್ದಾರೆ. ಇವತ್ತು ಸಂಜೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸಭೆ ಕರೆದು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
For More Updates Join our WhatsApp Group :
