ಬೆಂಗಳೂರು: ಖಳನಟ ಹರೀಶ್ ರಾಯ್ ನಿಧನ ‘ಓಂ’, ‘ನಲ್ಲ’ ಇತ್ತೀಚೆಗಿನ ಬ್ಲಾಕ್ ಬಸ್ಟರ್ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ಖಳನಟ ಹರೀಶ್ ರಾಯ್ ಅವರು ಇಂದು (ನವೆಂಬರ್ 06) ನಿಧನ ಹೊಂದಿದ್ದಾರೆ. ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಚಿಕಿತ್ಸೆಗಾಗಿ ಹಲವು ನಟ-ನಟಿಯರು ಆರ್ಥಿಕ ಸಹಾಯ ಮಾಡಿದ್ದರು.
ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.
ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡಿರುವುದಾಗಿ ಹರೀಶ್ ರಾಯ್ ಹೇಳಿಕೊಂಡಿದ್ದರು.
ಹಲವಾರು ಮಂದಿ ಸಿನಿಮಾ ಮಂದಿ ಹೋಗಿ ಹರೀಶ್ ರಾಯ್ ಅವರನ್ನು ಮಾತನಾಡಿಸಿ ತಾವು ಜೊತೆಗೆ ಇರುವುದಾಗಿ ಭರವಸೆ ನೀಡಿದ್ದರು. ಹಲವು ಯೂಟ್ಯೂಬರ್ಗಳು ಸಹ ಹೋಗಿದ್ದರು. ಕಳೆದ ಕೆಲ ತಿಂಗಳುಗಳಿಂದಲೂ ಸತತವಾಗಿ ಚಿಕಿತ್ಸೆಯನ್ನು ಪಡೆಯುತ್ತಲೇ ಇದ್ದರು ಹರೀಶ್ ರಾಯ್. ಇದೀಗ ಕೊನೆಗೆ ನಿಧನ ಹೊಂದಿದ್ದಾರೆ.
For More Updates Join our WhatsApp Group :
