ಬೆಂಗಳೂರು : ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯ ಕಾಟ ತಾಳಲಾರದೆ ಮಹಿಳೆಯೊಬ್ಬರು ವಿಚ್ಛೇದನ ಕೇಳಿದ್ದೇ ಆಕೆಗೆ ಮುಳುವಾಗಿದೆ. ಪತ್ನಿಯ ಮಾನ ರಕ್ಷಣೆ ಮಾಡಬೇಕಾದ ಪತಿಯೇ ಆಕೆಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿ ಗೋವಿಂದರಾಜು (27) ಎಂಬಾತನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಂಡ-ಹೆಂಡತಿ ಮಧ್ಯೆ ಏನಾಗಿತ್ತು?
ಆರೋಪಿ ಗೋವಿಂದರಾಜು ಹಾಗೂ ಮಹಿಳೆ ಬೆಂಗಳೂರಿನ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪರಿಚಯವಾಗಿದ್ದರು. ನಂತರ 2024ರಲ್ಲಿ ವಿವಾಹವಾಗಿದ್ದರು. ನಂತರದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾಗೂ ಕುಡಿತದ ದಾಸನಾಗಿದ್ದ ಗೋವಿಂದರಾಜು ಅದರಲ್ಲೇ ಹಣ ಕಳೆದುಕೊಳ್ಳುತ್ತಿದ್ದ. ಅಲ್ಲದೆ, ಪತ್ನಿ ದುಡಿದು ತಂದ ಹಣವನ್ನೂ ಆನ್ಲೈನ್ ಬೆಟ್ಟಿಂಗ್, ಕುಡಿತಕ್ಕೆ ಬಳಸುತ್ತಿದ್ದ. ಇದರಿಂದಾಗಿ ದಂಪತಿ ಮಧ್ಯೆ ನಿತ್ಯ ಜಗಳವಾಗುತ್ತಿತ್ತು.
ಕುಡಿತದ ಚಟದಿಂದ ಹಣ ಕಳೆದುಕೊಂಡು ಮನೆಗೆ ಬರುವ ಗೋವಿಂದರಾಜು ನಿತ್ಯ ಹೆಂಡತಿ ಮೇಲೆ ಹಲ್ಲೆ ಮಾಡುತ್ತಿದ್ದ. ಗಂಡನ ದೌರ್ಜನ್ಯದಿಂದ ಬೇಸತ್ತ ಮಹಿಳೆ ಬೆಂಗಳೂರು ತೊರೆದು ಆಂಧ್ರ ಪ್ರದೇಶದಲ್ಲಿರುವ ತವರು ಮನೆಗೆ ತೆರಳಿದ್ದರು.
ತವರಿಗೆ ತೆರಳಿದ್ದ ಹೆಂಡತಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ
ಪತಿಯ ಕಾಟದಿಂದ ಬೇಸತ್ತು ತವರಿಗೆ ಹೋದ ಮಹಿಳೆ ಗೋವಿಂದರಾಜು ಬಳಿ ವಿಚ್ಛೇದನ ಕೇಳಿದ್ದಳು. ಇದರಿಂದಾಗಿ ಆಕೆಗೆ ಅಲ್ಲಿಯೂ ನೆಮ್ಮದಿ ಇರಲ್ಲದಂತಾಗಿತ್ತು. ವಿಚ್ಛೇದನ ಕೇಳಿದ್ದರಿಂದ ಸಿಟ್ಟಾಗಿ ಪತ್ನಿಗೆ ಕರೆ ಮಾಡಿದ್ದ ಗೋವಿಂದರಾಜು, ಖಾಸಗಿ ಫೋಟೋಗಳು ಮತ್ತು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಆಕೆ ಬೆಂಗಳೂರಿಗೆ ಬಂದಿ ಪೇಯಿಂಗ್ ಗೆಸ್ಟ್ ಆಗಿ ನೆಲೆಸಿದ್ದಳು.
For More Updates Join our WhatsApp Group :
