ಬೆಂಗಳೂರು: ನವೆಂಬರ್ ಕ್ರಾಂತಿ ಚರ್ಚೆ ನಡುವೆ ಕರ್ನಾಟಕ ಕಾಂಗ್ರೆಸ್ನಲ್ಲಿ ಸದ್ದಿಲ್ಲದೇ ಮಹತ್ವ ಬೆಳವಣಿಗೆ ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಬಣ ನಾಯಕತ್ವ ಬದಲಾವಣೆ ಧ್ವನಿ ಎತ್ತಿದ್ದರೆ, ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಬಣ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ದಾಳ ಉರುಳಿಸುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹೈಕಮಾಂಡ್ ಪ್ರವೇಶ ಮಾಡಿದ್ದು, ರಾಜ್ಯದಲ್ಲಾಗುತ್ತಿರುವ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಹೌದು….ಸಂಪುಟ ಪುನಾರಚನೆ ಹಾಗೂ ಸಿಎಂ ಬದಲಾವಣೆ ಮಾಡಿದರೆ ಏನೆಲ್ಲಾ ಆಗಬಹುದು ಎನ್ನುವ ಸಾಧಕ ಬಾಧಕಗಳನ್ನು ಬಗ್ಗೆ ಹೈಕಮಾಂಡ್ ಗುಪ್ತವಾಗಿಯೇ ಮಾಹಿತಿ ಸಂಗ್ರಹಿಸಿದೆ. ಹೈಕಮಾಂಡ್ ಸೂಚನೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆಯೇ ವೀಕ್ಷಕರಾಗಿ ಪಿ.ಚಿದಂಬರಂ ಬೆಂಗಳೂರಿಗೆ ಆಗಮಿಸಿದ್ದು, ಕರ್ನಾಟಕ ಕಾಂಗ್ರೆಸ್ನಲ್ಲಿ ಆಂತರಿಕವಾಗಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ಮಾಹಿತಿ ಸಂಗ್ರಹಿಸಿಕೊಂಡು ಹೋಗಿದ್ದಾರೆ.
4 ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪಿ.ಚಿದಂಬರಂ ಕಾಂಗ್ರೆಸ್ನ ಹಿರಿಯ ನಾಯಕರ ಜೊತೆ ಗೌಪ್ಯ ಸಭೆ ಮಾಡಿದ್ದು, ಸಿಎಂ ಬದಲಾವಣೆ, ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಹೈಕಮಾಂಡ್, ಕರ್ನಾಟಕದಲ್ಲಿ ಮಹತ್ವ ಬದಲಾವಣೆ ಬಗ್ಗೆ ಚಿಂತನೆ ನಡೆಸಿದೆಯಾ ಎನ್ನುವ ಪ್ರಶ್ನೆ ಉದ್ಭಸಿದೆ.
For More Updates Join our WhatsApp Group :
