ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಸಂಘ (ಡಿಸಿಸಿ) ಬ್ಯಾಂಕ್‌ನ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅಧ್ಯಕ್ಷರಾಗಿದ್ದರೆ, ಕಾಂಗ್ರೆಸ್ ಶಾಸಕ ರಾಜು ಕಾಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 30- 30 ತಿಂಗಳು ಅಧಿಕಾರ ಹಂಚಿಕೆ ಸೂತ್ರ ನಡೆದಿದೆ.
ಇನ್ನು ಬಿಜೆಪಿಗರನ್ನು ಏಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಬಗ್ಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ.
30 ತಿಂಗಳ ಅವಧಿಗೆ ಅಧಿಕಾರ ಹಂಚಿಕೆಯಾಗಿದೆ. ಬಿಜೆಪಿಗೆ ಈಗ ಅಧ್ಯಕ್ಷ ಸ್ಥಾನ, ಕಾಂಗ್ರೆಸ್ ಗೆ ಉಪಾಧ್ಯಕ್ಷ ಸ್ಥಾನ ಹಂಚಿಕೊಂಡಿದ್ದೇವೆ. ಈ ಹಿಂದೆ ನಾವು 3 ಜನ ಇದ್ದರೂ ಬಿಜೆಪಿಯವರು ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದೇವೆ. ಜೊಲ್ಲೆಯವರು ನಮ್ಮನ್ನ ನಂಬಿ ಬಂದಿದ್ದರು. ಹೀಗಾಗಿ ಜೊಲ್ಲೆಯವರನ್ನ ಗೆಲ್ಲಿಸಿ, ಅಧ್ಯಕ್ಷರಾಗಿ ಮಾಡಿದ್ದೇವೆ ಎಂದರು.
For More Updates Join our WhatsApp Group :
