ಮೈಸೂರು: ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದರು.
ಮೃತರ ಕುಟುಂಬದ ವರ್ಗದವರಿಗೆ ಸಂತಾಪಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
For More Updates Join our WhatsApp Group :
