ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿ ಕೆಂಪು ಕೋಟೆ ಬಳಿ ಐ20 ಕಾರು ಸ್ಫೋಟಗೊಂಡಿದ್ದು,ಘಟನೆಯಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಯಾಗಿದೆ. ಇನ್ನು ಯಾವ ಕಾರಣಕ್ಕೆ ಸ್ಫೋಟ ಸಂಭವಿಸಿತು? ಕಾರಿನ ಹಿಂದುಗಡೆ ಅಳವಡಿಸಿದ್ದ ಸಿಎನ್‌ಜಿಯಿಂದ ಸ್ಫೋಟ ಸಂಭವಿಸಿತ್ತಾ? ಹೀಗೆ ನಾನಾ ರೀತಿಯ ವರದಿಗಳು ಆರಂಭದಲ್ಲಿ ಪ್ರಕಟವಾಗಿದ್ದವು. ಆದರೆ ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಯಾವ ಕಾರಿನಿಂದ ಈ ಕೃತ್ಯ ಸಂಭವಿಸಿದೆ ಎನ್ನುವುದನ್ನು ಪೊಲೀಸರು ನಿಖರವಾಗಿ ಪತ್ತೆ ಹೆಚ್ಚಿದ್ದಾರೆ.
ಸ್ಫೋಟ ನಡೆದ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು (Delhi Police) ಮೊದಲು ರಸ್ತೆಯಲ್ಲಿರುವ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಐ20 (i20)ನಿಂದ ಈ ಕೃತ್ಯ ನಡೆದಿದೆ ಎನ್ನುವುದು ಗೊತ್ತಾಗಿದೆ. ಐ20 ಕಾರಿನಿಂದ ಸ್ಫೋಟ ಸಂಭವಿಸಿದ ವಿಚಾರ ತಿಳಿಯುತ್ತಿದ್ದಂತೆ ಇಡೀ ದಿನ ಈ ಕಾರು ಎಲ್ಲೆಲ್ಲಿ ಓಡಾಡಿದೆ. ದೆಹಲಿಗೆ ಎಲ್ಲಿಂದ ಪ್ರವೇಶಿಸಿದೆ ಎಂಬ ಮಾಹಿತಿಯನ್ನು ಕಲೆಹಾಕಲು ಮತ್ತಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಜಾಲಾಡಿದ್ದಾರೆ. ಆಗ ಮತ್ತಷ್ಟು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿದೆ.
ಸ್ಫೋಟಗೊಂಡ ದಿನ ಅಂದರೆ ಸೋಮವಾರ(ನವೆಂಬರ್ 10) ಬೆಳ್ಳಗ್ಗೆಯಿಂದ ಸಂಜೆಯವರಗೆ ಕಾರಿನ ಸಂಚಾರದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಪೊಲೀಸರು, ಸುಮಾರು 11 ಗಂಟೆಗಳ ಹಿಂದೆ ಫರಿದಾಬಾದ್‌ನಿಂದ ದೆಹಲಿಯ ಕೆಂಪು ಕೋಟೆಗೆ ಹೊರಟು ದಾರಿಯುದ್ದಕ್ಕೂ ಹಲವಾರು ಸ್ಥಳಗಳನ್ನು ಪರಿಶೀಲಿಸಿದ್ದಾರೆ.
ಕಾರು ಎಲ್ಲಿಂದ ಬಂತು?
- ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಸೋಮವಾರ ಬೆಳಿಗ್ಗೆ 7:30 ಕ್ಕೆ ಫರಿದಾಬಾದ್‌ನ ಏಷ್ಯನ್ ಆಸ್ಪತ್ರೆಯ ಹೊರಗೆ ಕಾರು ಬಂದಿದೆ.
- ನಂತರ ಬೆಳಿಗ್ಗೆ 8:13ಕ್ಕೆ ಕಾರು ಬದರ್ಪುರ್ ಟೋಲ್ ದಾಟಿ ದೆಹಲಿಯನ್ನು ಪ್ರವೇಶಿಸಿದೆ.
- ಬೆಳಿಗ್ಗೆ 8:20ಕ್ಕೆ ಓಖ್ಲಾ ಕೈಗಾರಿಕಾ ಪ್ರದೇಶದ ಬಳಿಯ ಪೆಟ್ರೋಲ್ ಪಂಪ್ ಬಳಿ ಕಾರು ಕಾಣಿಸಿಕೊಂಡಿತು
- ಮಧ್ಯಾಹ್ನ 3:19 ಕ್ಕೆ ಕಾರು ಕೆಂಪು ಕೋಟೆ ಸಂಕೀರ್ಣದ ಬಳಿಯ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿ ಸುಮಾರು ಮೂರು ಗಂಟೆಗಳ ಕಾಲ ಅಲ್ಲಿಯೇ ನಿಂತಿತ್ತು.
- ಸಂಜೆ 6:22 ಕ್ಕೆ, ಕಾರು ಪಾರ್ಕಿಂಗ್ ಸ್ಥಳದಿಂದ ಹೊರಬಂದು ಕೆಂಪು ಕೋಟೆಯ ಕಡೆಗೆ ಹೋಯಿತು.
- ಕೇವಲ 24 ನಿಮಿಷಗಳ ನಂತರ ಸಂಜೆ 6:52 ಕ್ಕೆ ಕಾರು ಇನ್ನೂ ಚಲಿಸುತ್ತಿರುವಾಗ ಭಾರಿ ಸ್ಫೋಟ ಸಂಭವಿಸಿದೆ.
For More Updates Join our WhatsApp Group :
