ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭೂತಾನ್ ಪ್ರವಾಸದಲ್ಲಿದ್ದಾರೆ. ಭೂತಾನ್ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಭೂತಾನ್ನ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರ ಹುಟ್ಟುಹಬ್ಬದಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಥಿಂಪುವಿನ ಚಾಂಗ್ಲಿಮಿಥಾಂಗ್ ಕ್ರೀಡಾಂಗಣದಲ್ಲಿ ದೆಹಲಿ ಸ್ಫೋಟದ ಸಂತ್ರಸ್ತರಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಅಲ್ಲಿ ಸಾವಿರಾರು ಭೂತಾನಿನ ನಾಗರಿಕರು ಒಗ್ಗಟ್ಟಿನಿಂದ ಸೇರಿದ್ದರು.
ದೆಹಲಿಯಲ್ಲಿ 9ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡು ಹಲವಾರು ಜನರನ್ನು ಗಾಯಗೊಳಿಸಿದ ಕೆಂಪು ಕೋಟೆ ಸ್ಫೋಟದ ನಂತರ ಭಾರತಕ್ಕಾಗಿ ಪ್ರಾರ್ಥಿಸುವಂತೆ ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ತಮ್ಮ ದೇಶದ ಜನರ ಬಳಿ ಮನವಿ ಮಾಡಿದ್ದಾರೆ.
ಈ ಭೇಟಿಯ ಸಮಯದಲ್ಲಿ ಮೋದಿ ಅವರು ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಮತ್ತು ಪ್ರಧಾನಿ ಟೋಬ್ಗೇ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅವರು ಜಂಟಿಯಾಗಿ 1,020 ಮೆಗಾವ್ಯಾಟ್ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
For More Updates Join our WhatsApp Group :
