ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. 20ರಿಂದ 25 ವಯಸ್ಸಿನ ಯುವಕರು ಈ ದಂಧೆಯಲ್ಲಿ ನಿರತರಾಗಿದ್ದು, ಊರಿನ 150 ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿಗೊಂಡಿರುವ ಆಘಾತಕಾರಿ ವಿಷಯ ಈ ವೇಳೆ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ವಿಕಾಸ್ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಸೆ.15ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್ಲೈನ್ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್ ಮಾಡಿದ್ದರು. ಈ ವೇಳೆ ಮೊಬೈಲ್ಗೆ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರಿಯಾಂಕ ಕ್ಲಿಕ್ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ 55 ಸಾವಿರ ಹಣ ಕಳುಹಿಸುವಂತೆ ಮೆಸೇಜ್ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು.
For More Updates Join our WhatsApp Group :
