ಹೈಕೋರ್ಟ್ ತಿಮರೋಡಿ ಮತ್ತು ತಂಡಕ್ಕೆ ಶಾಕ್, ತನಿಖೆಗೆ ಹಳೆ ತಡೆಯಾಜ್ಞೆ ತೆರವು.

ಹೈಕೋರ್ಟ್ ತಿಮರೋಡಿ ಮತ್ತು ತಂಡಕ್ಕೆ ಶಾಕ್, ತನಿಖೆಗೆ ಹಳೆ ತಡೆಯಾಜ್ಞೆ ತೆರವು.

ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದ್ದು, ತನಿಖೆಗೆ ಅನುಮತಿ ನೀಡಿದೆ. ಹೀಗಾಗಿ ಗಿರೀಶ್ ಮಟ್ಟಣ್ಣನವರ್​, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠ್ಠಲಗೌಡ ಎಸ್​ಐಟಿ ತನಿಖೆಯನ್ನ ಮತ್ತೆ ಎದುರಿಸಬೇಕಿದೆ.

ಪ್ರಕರಣ ಸಂಬಂಧ ಎಸ್‌ಐಟಿ ಪರ ವಾದಿಸಿದ್ದ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆಂದು ನ್ಯಾಯಾಲಕ್ಕೆ ತಿಳಿಸಿದ್ದರು. ಈ ಹಿನ್ನಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ, ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ಮಾಡಲಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ 39/2025 ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್​, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠ್ಠಲಗೌಡ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಬಾಲನ್​, ಈಗಾಲೇ 9 ಬಾರಿ ನೋಟಿಸ್​ ನೀಡಿ ವಿಚಾರಣೆ ನಡೆಸಲಾಗಿದೆ. ಎಫ್ಐಆರ್​ನಲ್ಲಿ ನಮ್ಮನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್ಯಾಪ್​, ಇಮೇಲ್​ಗಳಲ್ಲಿ ನೀಡಿದ್ದಾರೆ. BNSS ಸೆಕ್ಷನ್​​ 35(3) ಅಡಿಯಲ್ಲಿ ಸಮನ್ಸ್ ನೀಡಿದ್ದು, ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನು ಬಾಹಿರ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *