ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟಕ್ಕೆ ಸಂಬಂಧಿಸಿರಬಹುದು ಎಂದು ನಂಬಲಾದ ಕೆಂಪು ಫೋರ್ಡ್ ಇಕೋಸ್ಪೋರ್ಟ್‌ಗಾಗಿ ತನಿಖಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ದೆಹಲಿಯಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳು, ಪೋಸ್ಟ್‌ಗಳು ಮತ್ತು ಗಡಿ ಚೆಕ್‌ಪೋಸ್ಟ್‌ಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಸ್ಫೋಟದಲ್ಲಿ ಬಳಸಲಾದ ಹುಂಡೈ i20 ಜೊತೆಗೆ ಶಂಕಿತರು ಇಕೋಸ್ಪೋರ್ಟ್ಸ್ ಕಾರನ್ನು ಕೂಡ ಹೊಂದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಐದು ದೆಹಲಿ ಪೊಲೀಸ್ ತಂಡಗಳು ಪ್ರಸ್ತುತ ಇಕೋಸ್ಪೋರ್ಟ್ ಕಾರಿಗಾಗಿ ಶೋಧ ನಡೆಸುತ್ತಿವೆ. ಈ ಬಗ್ಗೆ ಉತ್ತರ ಪ್ರದೇಶ ಮತ್ತು ಹರಿಯಾಣದ ಪೊಲೀಸ್ ಪಡೆಗಳಿಗೂ ಸಹ ಮಾಹಿತಿ ನೀಡಲಾಗಿದೆ. DL10CK0458 ಸಂಖ್ಯೆಯನ್ನು ಹೊಂದಿರುವ ಕೆಂಪು ಇಕೋಸ್ಪೋರ್ಟ್ ಕಾರನ್ನು ರಾಜೌರಿ ಗಾರ್ಡನ್‌ನಲ್ಲಿ ಈ ಪ್ರಕರಣದ ಪ್ರಮುಖ ಶಂಕಿತ ಉಮರ್ ಉನ್ ನಬಿ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈ ಕಾರು ಇದೀಗ ನಾಪತ್ತೆಯಾಗಿದೆ.
ಸೋಮವಾರ ಸಂಜೆ ಲಾಲ್ ಕ್ವಿಲಾ ಮೆಟ್ರೋ ನಿಲ್ದಾಣದ ಗೇಟ್ 1 ಬಳಿ ನಿಧಾನವಾಗಿ ಚಲಿಸುತ್ತಿದ್ದ ಹುಂಡೈ i20 ಕಾರು ಸ್ಫೋಟವಾಗಿತ್ತು. ಇದರಿಂದ 10 ಜನರು ಸಾವನ್ನಪ್ಪಿದ್ದರು. 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಫರಿದಾಬಾದ್‌ನಲ್ಲಿ ಇತ್ತೀಚೆಗೆ ಬಹಿರಂಗಗೊಂಡ ಭಯೋತ್ಪಾದಕ ಘಟಕಕ್ಕೂ ಈ ಸ್ಫೋಟಕ್ಕೂ ಸಂಬಂಧವಿದೆ ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಹಲವಾರು ಶಂಕಿತರನ್ನು ಈಗಾಗಲೇ ಬಂಧಿಸಲಾಗಿದೆ. ಈ ದಾಳಿಯ ಹಿಂದಿನ ಸಂಪೂರ್ಣ ಜಾಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.
For More Updates Join our WhatsApp Group :
