ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಬಲ್ಡೋಟಾ ಸ್ಟೀಲ್ ಕಾರ್ಖಾನೆಗೆ ಕೊಪ್ಪಳದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಬಂದಿದೆ. ಸ್ವತಃ ಗವಿ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಡಿಸಿದ್ದರು. ಈ ನಡುವೆ ಕಂಪನಿಗೆ ಜಾಗ ನೀಡಿದವರು ಇವರೆಲ್ಲರ ವಿರೋಧಕ್ಕೆ ಸೆಡ್ಡು ಹೊಡೆದಿದ್ದು, ಕಾರ್ಖಾನೆ ಬೇಕೆಂದು ಹೋರಾಟ ನಡೆಸಿದ್ದಾರೆ. ಕಾರ್ಖಾನೆ ಸ್ಥಾಪಿಸಿ, ಇಲ್ಲವೇ ಸರ್ಕಾರಿ ಉದ್ಯೋಗ ಕೊಡುವಂತೆ ಆಗ್ರಹಿಸಿ ಕೊಪ್ಪಳದ ಅಶೋಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
ಕಂಪನಿಗೆ ಜಾಗ ನೀಡಿದವ ಈ ಹೊಸ ಹೋರಾಟದ ಮೂಲಕ ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಗೆ ಪರ ಮತ್ತು ವಿರೋಧ ಎರಡೂ ಅಭಿಪ್ರಾಯಗಳು ವ್ಯಕ್ತವಾದಂತಾಗಿವೆ. ಕಳೆದ ಒಂದು ವರ್ಷದಿಂದಲೂ ಕಂಪನಿ ವಿರೋಧಿಸಿ ನಡೆಯುತ್ತಿದ್ದ ಹೋರಾಟಕ್ಕೆ ಇವರು ಸೆಡ್ಡು ಹೊಡೆದಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಗವಿ ಮಠದ ಸ್ವಾಮೀಜಿಯೇ ಕಂಪನಿಯನ್ನು ವಿರೋಧಿಸಿದ್ದರೂ ಈ ರೀತಿ ಪ್ರತಿಭಟನೆ ನಡೆಸಿರೋದೀಗ ಆಕ್ರೋಶಕ್ಕೆ ಕಾರಣವಾಗಿದೆ.
ಬಲ್ಡೋಟಾ ಕಾರ್ಖಾನೆ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಸಾಂಸ್ಕೃತಿಕ ರಾಜಧಾನಿ ಕೊಪ್ಪಳ ಇದೀಗ ಕರಿ ಅರಳಿಯಂತಾಗಿದೆ. ಬಲ್ಡೋಟಾ ಸೇರಿದಂತೆ ಕೊಪ್ಪಳದಲ್ಲಿ ಯಾವುದೇ ಕಾರ್ಖಾನೆ ಆರಂಭಕ್ಕೆ ನನ್ನ ವಿರೋಧವಿದೆ ಎಂದಿದ್ದರು. ದೇಶದ ಪ್ರಗತಿಗೆ ಕಾರ್ಖಾನೆಗಳು ಬೇಕು. ಆದರೆ, ಯಾವ ಭಾಗದಲ್ಲಿ ಎಷ್ಟು ಮುಖ್ಯ ಅಂತ ನೋಡಬೇಕು. ಕೊಪ್ಪಳ ತಾಲೂಕಿನಲ್ಲಿ 202 ಕಾರ್ಖಾನೆಗಳಿವೆ. ಬರೀ ಕಾರ್ಖಾನೆಗಳೇ ಇದ್ದರೆ ಜನ ಇರುವುದಾರೂ ಎಲ್ಲಿ? ಇದೇ ರೀತಿ ಕಾರ್ಖಾನೆ ಆರಂಭವಾದರೆ ಕೊಪ್ಪಳ ನರಕವಾಗುತ್ತದೆ. ತೊಟ್ಟಿಲಲ್ಲಿ ಹೋಗುವವರು ಕಡಿಮೆಯಾಗುತ್ತಾರೆ. ನರಕಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತದೆ. ಸದ್ಯ ಕೊಪ್ಪಳ ತಿಪ್ಪೆ ಆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
For More Updates Join our WhatsApp Group :
