ಯಾದಗಿರಿ: ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಂಜಲಿ (35) ಮೇಲೆ ನ. 12 ರಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಂಜಲಿ ಸಾವನ್ನಪ್ಪಿದ್ದಾರೆ.
ಅಧಿಕಾರಿಯ ಹತ್ಯೆಗೈದ ದುಷ್ಕರ್ಮಿಗಳು ವಶಕ್ಕೆ
ಅಧಿಕಾರಿಯ ಮೇಲೆ ಹಳೆಯ ದ್ವೇಷ ಹೊಂದಿದ್ದ ದುಷ್ಕರ್ಮಿಗಳು ಕೊಡಲಿ ಸೇರಿದಂತೆ ಇನ್ನಿತರ ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ್ದು, ಕೊಲೆ ಮಾಡುವ ಉದ್ದೇಶದಿಂದಲೇ ಪ್ಲಾನ್ ಮಾಡಿ ದಾಳಿ ಮಾಡಿದ್ದರೆಂದು ಶಂಕಿಸಲಾಗಿತ್ತು. ಈ ಕೃತ್ಯಕ್ಕೆ ಸಂಬಂಧಿಸಿದ ಯಲ್ಲಪ್ಪ, ಕಾಶಿನಾಥ, ದತ್ತಾತ್ರೇಯ ಮತ್ತು ಜಗದೀಶ್ ಎಂಬ ನಾಲ್ವರು ಹಂತಕರನ್ನು ಯಾದಗಿರಿ ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ.
ಸ್ವಿಫ್ಟ್ ಕಾರಿನಲ್ಲಿ ಬಂದು ಕೊಲೆ ಮಾಡಿ ಮಹಾರಾಷ್ಟ್ರದ ಕಡೆಗೆ ಪರಾರಿಯಾಗುತ್ತಿದ್ದ ವೇಳೆ ಇವರನ್ನು ಸೆರೆಹಿಡಿಯಲಾಗಿದೆ. ಶಹಾಬಾದ್ ಮೂಲದ ವಿಜಯ್ ಹಾಗೂ ಶಂಕರ್ ಅವರು ಅಂಜಲಿ ಕೊಲೆಗೆ ಸುಪಾರಿ ನೀಡಿದ್ದಾರೆಂದು ಆರೋಪಿಗಳು ತನಿಖೆಯ ವೇಳೆ ಒಪ್ಪಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ಅಂಜಲಿಯ ಪತಿ ಗಿರೀಶ್ರನ್ನೂ ಸಹ ದುಷ್ಕರ್ಮಿಗಳಾದ ವಿಜಯ್ ಮತ್ತು ಶಂಕರ್ ಭೀಕರವಾಗಿ ಹತ್ಯೆಗೈದಿದ್ದರು. ಇದೇ ದ್ವೇಷದಿಂದ ಅಧಿಕಾರಿ ಕಳೆದ ಸೆಪ್ಟೆಂಬರ್‌ನಲ್ಲಿ ಶಂಕರ್ ಮೇಲೆ ಹಲ್ಲೆ ನಡೆಸಿರಬಹುದೆಂಬ ಶಂಕೆಯಿಂದ ಪ್ರತೀಕಾರವಾಗಿ ಈ ಕೊಲೆ ಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗಿದೆ. ಸುಪಾರಿ ನೀಡಿದ ಪ್ರಮುಖ ಆರೋಪಿಗಳಾದ ವಿಜಯ್ ಮತ್ತು ಶಂಕರ್ ಇದೀಗ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
For More Updates Join our WhatsApp Group :
