ರಾಮನಗರ: ಯಾವುದೇ ಸರ್ಕಾರಿ ಜಾಗದಲ್ಲಿ ಏನನ್ನಾದರೂ ನಿರ್ಮಿಸಬೇಕಾದಲ್ಲಿ ಸಂಬಂಧಪಟ್ಟ ಆಡಳಿತದ ಅನುಮತಿ ಕಡ್ಡಾಯವಾಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೈರಮಂಗಲ ಕ್ರಾಸ್ ಬಳಿ ಜಿಲ್ಲಾಡಳಿತದ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗದಲ್ಲಿ ಕೆಲ ದಿನಗಳ ಕೆಳಗೆ ಏಕಾಏಕಿ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಾಗಿದ್ದು, ದಲಿತ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದೆ.
ಅಂಬೇಡ್ಕರ್ ಪ್ರತಿಮೆ ನಿರ್ಮಾಣವಾಗಬೇಕಿದ್ದ ಜಾಗದಲ್ಲಿ ಕೆಂಪೇಗೌಡರ ಪ್ರತಿಮೆ
ಇದೀಗ ನಿರ್ಮಾಣಗೊಂಡಿರುವ ಕೆಂಪೇಗೌಡರ ಪ್ರತಿಮೆ ಸ್ಥಳದಲ್ಲಿ ಈ ಹಿಂದೆ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡುವಂತೆ ಸ್ಥಳೀಯ ಪುರಸಭೆ ಹಾಗೂ ಶಾಸಕ ಬಾಲಕೃಷ್ಣ ಅವರಿಗೆ ದಲಿತ ಸಂಘಟನೆಗಳು ಮನವಿ ಮಾಡಿದ್ದರು. ಆದರೆ ಅದೇ ಜಾಗಲ್ಲಿ ಈಗ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಗಿದೆ. ಇಂತಹ ಸಂದರ್ಭದಲ್ಲಿ ಸಂಬಂಧಪಟ್ಟ ಯಾವುದೇ ಆಡಳಿತದಿಂದ ಅನುಮತಿ ಪಡೆಯದೆಯೇ ಕೆಂಪೇಗೌಡರ ಪ್ರತಿಮೆ ನಿರ್ಮಿಸಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪ ಮಾಡುತ್ತಿದ್ದಾರೆ.
ಪ್ರತಿಮೆಯಿರುವ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್
ಪ್ರತಿಮೆ ನಿರ್ಮಾಣದಿಂದ ಸಾಕಷ್ಟು ವಿವಾದ ಉಂಟಾಗಿದ್ದು, ಪ್ರತಿಮೆ ನಿರ್ಮಾಣದ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಜೊತೆಗೆ ಅದೇ ಸ್ಥಳದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡುವಂತೆ ದಲಿತ ಮುಖಂಡರು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡದಿ ಪುರಸಭೆ ವಿಪಕ್ಷ ನಾಯಕ ಉಮೇಶ್, ನಾವು ಈಗಾಗಲೇ ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಲ್ಲಿ ವಿವಿಧ ಮಹನೀಯರ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಶಾಸಕರು ಸ್ವಂತ ಹಣದಲ್ಲೇ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ ಎಂದಿದ್ದಾರೆ.
For More Updates Join our WhatsApp Group :
