ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ, ನಂದಿಗಿರಿಧಾಮದ ತಪ್ಪಲಿನ ಪುರಾಣ ಪ್ರಸಿದ್ದ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಇಂದು ಕಾರ್ತಿಕ ಮಾಸದ ಕೊನೆ ಸೋಮವಾರ ಹಿನ್ನಲೆ ಭಕ್ತ ಸಾಗರವೇ ಹರಿದುಬಂದಿದೆ. ರಾಜಧಾನಿ ಬೆಂಗಳೂರಿನ ಜನ ಹಾಗೂ ಈಶ್ವರನ ಭಕ್ತರು, ದೇವಸ್ಥಾನಕ್ಕೆ ಜನಸಾಗರವಾಗಿ ಹರಿದು ಬಂದಿದ್ದು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ನಂತರ ದೇವಸ್ಥಾನ ಆವರಣದಲ್ಲಿ ಎಣ್ಣೆ ದೀಪ ಹಚ್ಚಿ, ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.
ಕಾರ್ತಿಕ ಮಾಸದ ಕೊನೆ ಸೋಮವಾರದಂದು, ಮಾಡುವ ಪೂಜೆಗಳಲ್ಲಿ ಹೆಚ್ಚು ಫಲ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಇದರಿಂದ ಮಹಿಳಾ ಭಕ್ತರ ದಂಡು ದೇವಸ್ಥಾನದಲ್ಲಿ ಬಿಡುಬಿಟ್ಟಿದ್ದು, ಅರುಣಾಚಲೇಶ್ವರ, ಗಂಗಾಧರ ಹಾಗೂ ಗಿರಿಜಾಂಬ ಸಮೇತ ಶ್ರೀ ಬೋಗನಂದೀಶ್ವರ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ನಾಲ್ಕು ಗಂಟೆಯಿಂದ ವಿಶೇಷ ಪೂಜೆಗಳು ನಡೆಯುತ್ತಿವೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನ ಜನ ದೇವಸ್ಥಾನಕ್ಕೆ ಆಗಮಿಸುತ್ತಿದ್ದು, ಸುಮಾರು ಒಂದು ಲಕ್ಷ ಜನ ದೇವರ ದರ್ಶನ ಪಡೆಯುವ ಸಾದ್ಯತೆ ಇದೆ.
For More Updates Join our WhatsApp Group :
