ಬೆಂಗಳೂರು: ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್ಗೆ ಇಂದು ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳವಾರ 28ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್ ಅನ್ನು ಉದ್ಘಾಟಿಸಿದ್ದಾರೆ. ನವೆಂಬರ್ 18ರಿಂದ 20ರವರೆಗೆ ಮೂರು ದಿನಗಳ ಕಾಲ ಈ ತಂತ್ರಜ್ಞಾನ ಶೃಂಗಸಭೆ ನಡೆಯಲಿದೆ. 50ಕ್ಕೂ ಹೆಚ್ಚು ದೇಶಗಳ ತಂತ್ರಜ್ಞಾನ ಪರಿಣಿತರು, ನಾಯಕರು, ವಿವಿಧ ಕ್ಷೇತ್ರಗಳ ಉದ್ಯಮಪತಿಗಳು ಈ ಟೆಕ್ ಸಮಿಟ್ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಎಂಬಿ ಪಾಟೀಲ್, ಪ್ರಿಯಾಕ್ ಖರ್ಗೆ, ಬೆಂಗಳೂರಿನ ಪ್ರಮುಖ ಉದ್ಯಮಿಗಳಾದ ಕಿರಣ್ ಮಜುಮ್ದಾರ್, ಕ್ರಿಸ್ ಗೋಪಾಲಕೃಷ್ಣನ್, ಪ್ರಶಾಂತ್ ಪ್ರಕಾಶ್ ಮೊದಲಾದವರು ವೇದಿಕೆ ಹಂಚಿಕೊಂಡರು.
ತುಮಕೂರು ರಸ್ತೆಯಲ್ಲಿರುವ ಮಾದಾವರ ಮೆಟ್ರೋ ನಿಲ್ದಾಣ ಸಮೀಪದ ಬಿಇಐಸಿ ಮೈದಾನದಲ್ಲಿ ಮಂಗಳವಾರದಿಂದ ಗುರುವಾರದವರೆಗೂ ಈ ಟೆಕ್ ಸಮಿಟ್ ನಡೆಯಲಿದೆ. ಭವಿಷ್ಯದ ತಂತ್ರಜ್ಞಾನದ ಥೀಮ್ ಈ ಬಾರಿ ಸಮಿಟ್ನದ್ದಾಗಿದೆ. ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಬಿಟಿ ಇಲಾಖೆ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಸಂಸ್ಥೆ ಈ ತಂತ್ರಜ್ಞಾನ ಶೃಂಗಸಭೆಯನ್ನು ಆಯೋಜಿಸಿವೆ.
ಈ ವೇಳೆ, ಕರ್ನಾಟಕ ಸರ್ಕಾರದ ಹೊಸ ಐಟಿ, ಸ್ಟಾರ್ಟಪ್ ಮತ್ತು ಸ್ಪೇಸ್ಟೆಕ್ ನೀತಿಗಳನ್ನೂ ಅನಾವರಣಗೊಳಿಸಲಾಗುತ್ತದೆ. ಎಐ ಸಿದ್ಧ ಕಂಪ್ಯೂಟರ್ ಸೇರಿದಂತೆ ಹಲವು ವಿಶೇಷತೆಗಳು ಈ ಸಮಿಟ್ನಲ್ಲಿ ಕಾಣಸಿಗಲಿವೆ.
For More Updates Join our WhatsApp Group :
