ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಈ ನಡುವೆ ಡಿಎಂಕೆ ನಾಯಕ ಜಯಪಾಲನ್ ವಿವಾದಾತ್ಮನಕ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಡಿಎಂಕೆ ನಾಯಕ ಈ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ತೆಂಕಸಿ ಜಿಲ್ಲೆಯಲ್ಲಿ ಎಸ್‌ಐಆರ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಡಿಎಂಕೆ ದಕ್ಷಿಣ ಜಿಲ್ಲಾ ಕಾರ್ಯದರ್ಶಿ ಜಯಪಾಲನ್ ಅವರು ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಜೈಪಾಲನ್ ಮೋದಿಯನ್ನು ನರಕಾಸುರನಿಗೆ ಹೋಲಿಸಿದ್ದಾರೆ.
ಅವರನ್ನು ನಿರ್ಮೂಲನೆ ಮಾಡುವುದರಿಂದ ಮಾತ್ರ ತಮಿಳುನಾಡಿಗೆ ಲಾಭವಾಗಬಹುದು. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಹೋರಾಡಿ ವಿಜಯ ಸಾಧಿಸಬೇಕು ಎಂದು ಹೇಳಿದ್ದರು. ಇದೀಗ ಬಿಜೆಪಿ ಅವರನ್ನು ಬಂಧಿಸಬೇಕೆಂದು ಪಟ್ಟು ಹಿಡಿದಿದೆ. ಪ್ರಧಾನಿ ಮೋದಿ ಬುಧವಾರ ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಪವಿತ್ರ ಯಾತ್ರಾ ಸ್ಥಳಕ್ಕೆ ಮೊದಲು ಭೇಟಿ ನೀಡಲಿದ್ದಾರೆ. ಇದಾದ ನಂತರ ಅವರು ತಮಿಳುನಾಡಿನ ಕೊಯಮತ್ತೂರಿಗೆ ಪ್ರಯಾಣಿಸಲಿದ್ದಾರೆ.ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 21 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ.
For More Updates Join our WhatsApp Group :
