ಬೆಂಗಳೂರು: ನಗರದ ಡೈರಿ ಸರ್ಕಲ್ ಬಳಿ ಎಂಟಿಎಂ ವಾಹನದಲ್ಲಿದ್ದ ಬರೋಬ್ಬರಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಂಬಂಧ ಕಾರು ಪತ್ತೆಯಾಗಿದೆ. ದರೋಡೆಗೆ ಬಳಸಲಾಗಿದ್ದ ಇನ್ನೋವಾ ಕಾರು ತಿರುಪತಿಯಲ್ಲಿ ಬೆಂಗಳೂರು ಪೊಲೀಸರು ಸೀಜ್ ಮಾಡಿದ್ದಾರೆ.
ಇದರ ಬೆನ್ನಲ್ಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಇನ್ನು ತಿರುಪತಿಯಲ್ಲಿ ಪತ್ತೆಯಾದ ಇನೋವಾ ಕಾರಿನಲ್ಲಿ ಹಣ ಇರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕಾರಿನಲ್ಲೇ ಹಣವನ್ನು ತೆಗೆದುಕೊಂಡು ಹೋಗಿ ಮಾರ್ಗ ಮಧ್ಯೆ ಬೇರೆ ಕಡೆ ಡೈವರ್ಟ್ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಹೀಗಾಗಿ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ತಿರುಪತಿ ಪೊಲೀಸರ ಜೊತೆ ದಕ್ಷಿಣ ವಿಭಾಗ ಪೊಲೀಸರಿಂದ ಶೋಧ ನಡೆಯುತ್ತಿದೆ. ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಶೋಧ ನಡೆಸಲಾಗುತ್ತಿದೆ.
For More Updates Join our WhatsApp Group :
