ಶ್ರೀನಿವಾಸಪುರದಲ್ಲಿ ಭೀಕರ ಬಸ್ ಅಪ*ತ.

ಶ್ರೀನಿವಾಸಪುರದಲ್ಲಿ ಭೀಕರ ಬಸ್ ಅಪ*ತ.

ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಭೀಕರ ಬಸ್ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಆಂಧ್ರದ ಪೊದಟೂರು ಗ್ರಾಮದ ನಿವಾಸಿ ಅನಿತಾ (58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರದ ಬದ್ವೇಲ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ ಅಪಘಾತವಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

 ಗಾಯಾಳುಗಳನ್ನು ತಕ್ಷಣವೇ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಮತ್ತು ಆಂಧ್ರದ ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *