ಬೆಂಗಳೂರು : ಚಳಿ, ತುಂತುರು ಮಳೆ ಮತ್ತು ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಾದ್ಯಂತ ತರಕಾರಿ ಬೆಲೆಗಳು ಗಣನೀಯವಾಗಿ ಏರಿಕೆ ಕಂಡಿವೆ. ಹವಾಮಾನ ವೈಪರೀತ್ಯವು ತರಕಾರಿ ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಮಾರುಕಟ್ಟೆಯಲ್ಲಿ ತರಕಾರಿಗಳ ಲಭ್ಯತೆ ಕಡಿಮೆಯಾಗಿ ಬೆಲೆಗಳು ಹೆಚ್ಚಾಗಿವೆ. ವಿಶೇಷವಾಗಿ ನುಗ್ಗೆಕಾಯಿ ಬೆಲೆ ಭಾರೀ ಏರಿಕೆಯಾಗಿದೆ. ಬೆಂಗಳೂರಿನ ಎಂ.ಜಿ. ರೋಡ್ ಮಾರುಕಟ್ಟೆ ಸೇರಿದಂತೆ ಪ್ರಮುಖ ನಗರಗಳಲ್ಲಿ ಏರಿಕೆಯಾಗಿದೆ.
ಮೈಸೂರಿನಲ್ಲೂ ಬೆಲೆ ಏರಿಕೆ ಬಿಸಿ ತಟ್ಟಿದೆ. ಚಳಿ ಹಾಗೂನಿರಂತರ ಮಳೆಯಿಂದಾಗಿ ತರಕಾರಿಗಳ ಸಾಗಣೆ ಮತ್ತು ಸಂಗ್ರಹಣೆಯಲ್ಲಿ ಸಮಸ್ಯೆಗಳು ಉಂಟಾಗಿವೆ.ರಾಗಿ ಬೆಳೆಗೂ ಹವಾಮಾನ ವೈಪರೀತ್ಯದಿಂದ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ತರಕಾರಿ ವ್ಯಾಪಾರಿಗಳು ಮತ್ತು ಗ್ರಾಹಕರು ಇಬ್ಬರೂ ಈ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಚಂಡಮಾರುತದ ಪರಿಣಾಮದಿಂದಾಗಿ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದೆ ಎಂದು ಬೆಳೆಗಾರರು ಹೇಳಿದ್ದಾರೆ.
For More Updates Join our WhatsApp Group :
