11 ಲಕ್ಷ ಹಣವನ್ನು ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದ ಹೆಡ್ ಕಾನ್ಸ್ಟೆಬಲ್ ಪೊಲೀಸರ ವಶಕ್ಕೆ.
ಬೆಂಗಳೂರು : ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಶಂಕಿತ ವ್ಯಕ್ತಿಯ ನಗದು ತುಂಬಿದ ಚೀಲವನ್ನು ತನ್ನ ಮನೆಯಲ್ಲಿ ಅಡಗಿಸಿದ್ದ ವಿಚಾರ ಬೆಳಕಿಗೆ ಬಂದಿದ್ದು, ಸಂಪೂರ್ಣ ಪೊಲೀಸ್ ಠಾಣೆಗೆ ಮುಜುಗರ ತಂದಿದೆ. ಹೆಡ್ ಕಾನ್‌ಸ್ಟೆಬಲ್ ಜಬಿಯುಲ್ಲಾ ಐ. ಗುಡಿಯಾಲ್(48) ತಮ್ಮ ಮಲಗುವ ಕೋಣೆಯ ಹಾಸಿಗೆಯ ಕೆಳಗೆ ಸುಮಾರು 11 ಲಕ್ಷ ರೂ.ನಗದನ್ನು ಕೂಡಿಟ್ಟಿದ್ದು, ಘಟನೆ ಬೆಳಕಿಗೆ ಬಂದಾಗ ತಾನು ಸಂಗ್ರಹಿಸಿದ ಹಣವನ್ನು ಠಾಣೆಗೆ ಒಪ್ಪಿಸಲು ಮರೆತಿರುವುದಾಗಿ ಸಬೂಬು ಹೇಳಿದ್ದಾರೆ. ಅವರ ಸಹೋದ್ಯೋಗಿಗಳೂ ಈ ವಿಚಾರದಲ್ಲಿ ಮೌನ ವಹಿಸಿದ್ದು ಅನುಮಾನ ಹುಟ್ಟು ಹಾಕಿದೆ.
ಶಂಕಿತನ ಕಾರಿನಲ್ಲಿದ್ದ ಹಣ ಅಡಗಿಸಿಟ್ಟ ಕಾನ್ಸ್ಟೇಬಲ್
ಎರಡು ವಾರಗಳ ಹಿಂದೆ ಸಿಸಿಪಿಎಸ್ ತಂಡವು ಸೈಬರ್ ವಂಚನೆ ಪ್ರಕರಣದಲ್ಲಿ ಶಂಕಿತನೊಬ್ಬನನ್ನು ದೇವನಹಳ್ಳಿಯಲ್ಲಿ ಪತ್ತೆಹಚ್ಚಿತ್ತು. ಪೊಲೀಸರು ತನ್ನ ಹಿಂದೆ ಬಿದ್ದಿರುವುದನ್ನು ತಿಳಿದ ಶಂಕಿತನು ತನ್ನ ಕಾರನ್ನು ಬಿಟ್ಟು ಕಾಲ್ನಡಿಗೆಯಲ್ಲಿ ಪರಾರಿಯಾಗಿದ್ದನು. ಈ ವೇಳೆ ಶಂಕಿತನ ಕಾರಿನಲ್ಲಿ ನಗದು, ಲ್ಯಾಪ್‌ಟಾಪ್ ಮತ್ತು ಇನ್ನಿತರ ವಸ್ತುಗಳನ್ನು ಹೊಂದಿದ್ದ ಚೀಲ ಸಿಕ್ಕಿತ್ತು. ಜಬಿಯುಲ್ಲಾ ಇದನ್ನು ಗಮನಿಸಿದ್ದರೂ, ತಂಡಕ್ಕೆ ಮಾಹಿತಿ ನೀಡದೆ ಸುಮ್ಮನೆ ಚೀಲವನ್ನು ಮನೆಗೆ ತೆಗೆದುಕೊಂಡು ಹೋಗಿದ್ದರೆಂದು ತಿಳಿದು ಬಂದಿದೆ. ತನಿಖಾ ತಂಡ ಠಾಣೆಗೆ ಮರಳಿದಾಗ, ಶಂಕಿತ ಪರಾರಿಯಾಗಿದ್ದಾನೆ ಎಂಬ ವರದಿ ಮಾತ್ರ ಸಲ್ಲಿಸಲಾಯಿತು. ಬ್ರೀಫಿಂಗ್‌ನಲ್ಲಿ ಕಾರಿನಲ್ಲಿದ್ದ ಚೀಲ ಮತ್ತು ಅದರಲ್ಲಿನ ವಸ್ತುಗಳ ಪ್ರಸ್ತಾಪ ಯಾರೂ ಮಾಡಿರಲಿಲ್ಲ.
For More Updates Join our WhatsApp Group :
