ಮದುವೆಗೆ 2 ವಾರ ಬಾಕಿಯಿದ್ದ ಜೋಡಿ ಅಪ*ಘಾತ.
ಕೊಪ್ಪಳ : ಮದುವೆಗೆ ಎರಡು ವಾರ ಮಾತ್ರ ಬಾಕಿ ಉಳಿದಿತ್ತು. ಹೀಗಾಗಿ ಮದುವೆ ಸಿದ್ಧತೆಯಲ್ಲಿ ತೊಡಗಿದ್ದ ಜೋಡಿ, ಭಾನುವಾರ ಖುಷಿ ಖುಷಿಯಾಗಿ ಪ್ರೀ ವೆಡ್ಡಿಂಗ್ ಫೋಟೊಶೂಟ್ ಮಾಡಿಸಿಕೊಂಡಿತ್ತು. ಹೀಗೆ ಶೂಟ್ ಮುಗಿಸಿ ಮನೆಗೆ ವಾಪಸ್ ಆಗುವಾಗ ಭೀಕರ ಅಪಘಾತ ಸಂಭವಿಸಿದೆ. ಕೊಪ್ಪಳ ತಾಲೂಕಿನ ಗಂಗಾವತಿ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕರಿಯಪ್ಪ ಮಡಿವಾಳ (26) ಬಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತಪಟ್ಟಿದ್ದಾರೆ.
ಕವಿತಾ ಹಾಗೂ ಕರಿಯಪ್ಪಗೆ ವಿವಾಹ ನಿಶ್ಚವಾಗಿದ್ದು, ಡಿಸೆಂಬರ್ 21 ಮದುವೆ ನಿಗದಿ ಆಗಿತ್ತು. ಹೀಗಾಗಿ ಭಾನುವಾರ ಇಬ್ಬರೂ ಪ್ರೀ ವೆಡ್ಡಿಂಗ್ ಶೂಟ್ಗೆ ಹೋಗಿದ್ದರು. ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಗುಡ್ಡ ಪ್ರದೇಶದಲ್ಲಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ, ಬೆಣಕಲ್ ಬಳಿಯೇ ಇವರ ಬೈಕ್ ಲಾರಿಗೆ ಡಿಕ್ಕಿಯಾಗಿದೆ. ಮದುವೆ ಆಗಬೇಕಿದ್ದ ಈ ಜೋಡಿ ಸ್ಥಳದಲ್ಲೇ ಮಸಣ ಸೇರಿದೆ. ಗಂಗಾವತಿ ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಕಾರು-ಬೈಕ್ ಡಿಕ್ಕಿ: ಬಾಲಕಿ ಸಾವು, ತಂದೆ-ತಾಯಿ ಸ್ಥಿತಿ ಗಂಭೀರ
ಚಿಕ್ಕಮಗಳೂರು ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ಕ್ರಾಸ್ ಬಳಿ ದಂಪತಿ, ಮಕ್ಕಳು ತೆರಳುತ್ತಿದ್ದ ಬೈಕ್ಗೆ ಕಾರು ಡಿಕ್ಕಿ ಆಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ನಲ್ಲಿದ್ದ ಓರ್ವ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ, ತಾಯಿ ಮತ್ತು ಸಹೋದರಿಯ ಸ್ಥಿತಿ ಗಂಭೀರವಾಗಿದೆ.
ಮತ್ತೊಂದೆಡೆ, ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ. ಮದುವೆ ಆಮಂತ್ರಣ ನೀಡಿ ವಾಪಸ್ ಬರುತ್ತಿದ್ದ ಬಸವರಾಜ್ ಕಮ್ಮಾರ ಹಾಗೂ ಪ್ರಶಾಂತ ಬಡಿಗೇರ್ ಅಪಘಾತಕ್ಕೆ ಬಲಿ ಆಗಿದ್ದಾರೆ.
For More Updates Join our WhatsApp Group :




