ಸಿಕಾರ್ ಜಿಲ್ಲೆಯಲ್ಲಿ ಭಯಾನಕ ಅಪ*ಘಾತ.
ರಾಜಸ್ಥಾನ : ರಾಜಸ್ಥಾನದ ಸಿಕಾರ್ ಜಿಲ್ಲೆಯ ಫತೇಪುರ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಲೀಪರ್ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸ್ಲೀಪರ್ ಬಸ್ ಮತ್ತು ಎದುರುಗಡೆಯಿಂದ ಬರುತ್ತಿದ್ದ ಟ್ರಕ್ ಜೋರಾದ ಅಪಘಾತದ ಶಬ್ದ ಕೇಳಿದ ತಕ್ಷಣ ಹತ್ತಿರದ ನಿವಾಸಿಗಳು ಗಾಯಾಳುಗಳಿಗೆ ಸಹಾಯ ಮಾಡಲು ಧಾವಿಸಿದರು. ಮುಖಾಮುಖಿ ಡಿಕ್ಕಿ ಹೊಡೆದಿದೆ.
For More Updates Join our WhatsApp Group :




