ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಪೊಲೀಸ್ ಠಾಣೆಗೂ ಮೆರವಣಿಗೆ.
ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸಾಲದಕ್ಕೆ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದಲೇ ಪೊಲೀಸ್ ಠಾಣೆವರೆಗೂ ಮೆರವಣಿಗೆ ಮಾಡಿಕೊಂಡು ಬಂದಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಸವಣೂರು ಪಟ್ಟಣದ ಸರ್ಕಾರಿ ಉರ್ದು ಉನ್ನತೀಕರಿಸಿದ ಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಆರೋಪಿಸಲಾಗಿದ್ದು, ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ತೆರಳಿ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಕೊನೆಗೆ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ರಸ್ತೆ ಮೂಲಕ ಸವಣೂರು ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.
For More Updates Join our WhatsApp Group :




