ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ.

ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ.

ಭಾರತ  433  ರನ್  ಸಿಡಿಸಿದ  ಯಂಗ್  ಇಂಡಿಯಾ.

ದುಬೈನಲ್ಲಿ ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಯುವ ಪಡೆ ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಬರೋಬ್ಬರಿ 433 ರನ್ ಕಲೆಹಾಕಿದೆ. ತಂಡವನ್ನು ಈ ಬೃಹತ್ ಮೊತ್ತಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸಿಡಿಲಬ್ಬರದ 171 ರನ್​ಗಳ ಇನ್ನಿಂಗ್ಸ್ ಆಡಿದರೆ, ಆರನ್ ವರ್ಗೀಸ್ ಹಾಗೂ ವಿಹಾನ್ ಮಲ್ಹೋತ್ರಾ ತಲಾ 69 ರನ್​ಗಳ ಇನ್ನಿಂಗ್ಸ್ ಆಡಿದರು.

ದ್ವಿಶತಕದ ಜೊತೆಯಾಟ

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ಆಯುಷ್ ಮ್ಹಾತ್ರೆ ಹಾಗೂ ವೈಭವ್ ಸೂರ್ಯವಂಶಿ ಆರಂಭಿಕರಾಗಿ ಕಣಕ್ಕಿಳಿದರು. ಇಬ್ಬರಿಗೆ ಅನುಭವಿಗಳ ಜೊತೆ ಆಡಿದ ಅನುಭವವಿದ್ದ ಕಾರಣ ಒಂದೊಳ್ಳೆ ಆರಂಭದ ನಿರೀಕ್ಷೆ ಇತ್ತು. ಆದರೆ ನಾಯಕ ಆಯುಷ್ ಕೇವಲ 4 ರನ್ ಬಾರಿಸಿ ಔಟಾದರು. ಆ ಬಳಿಕ ಜೊತೆಯಾದ ವೈಭವ್ ಹಾಗೂ ಆರನ್ ವರ್ಗೀಸ್ ದಾಖಲೆಯ ದ್ವಿಶತಕದ ಜೊತೆಯಾಟ ಕಟ್ಟಿದರು. ಇದೇ ವೇಳೆ ವೈಭವ್ ಸೂರ್ಯವಂಶಿ ತಮ್ಮ ಶತಕವನ್ನು ಪೂರೈಸಿದರು. ಇತ್ತ ಆರನ್ ವರ್ಗೀಸ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *