ರಾಯಚೂರಿನಲ್ಲಿ ನಾಟಕವಾಡಿ ಮದುವೆ ಮುಂದಾಗುತ್ತಿರುತ್ತಿದ್ದಾಗ ಯುವತಿ ಬಂದು ನಿಲ್ಲಿಸಿದರು.
ರಾಯಚೂರು: ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಯ ನಾಟಕವಾಡಿ ಮೋಸ ಮಾಡಿದ ಆರೋಪದ ಮೇಲೆ ಯುವಕನೊಬ್ಬನ ಅದ್ಧೂರಿ ಮದುವೆಯನ್ನು ಸಂತ್ರಸ್ತ ಯುವತಿ ನಿಲ್ಲಿಸಿದ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ಓದುತ್ತಿದ್ದ ವೇಳೆ ರಿಷಬ್, ಕೊಪ್ಪಳದ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿ ಕೈಕೊಟ್ಟಿದ್ದು, ಇದೀಗ ಬೇರೆ ಯುವತಿ ಜತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದ.
ಈ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಿಸಿ ಸ್ಥಳಕ್ಕೆ ಬಂದು ನಡೆಯಬೇಕಿದ್ದ ಮದುವೆ ನಿಲ್ಲಿಸಿದ್ದಾಳೆ. ಸದ್ಯ ಪ್ರಿಯಕರನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಸಂತ್ರಸ್ತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಿಯಕರ ರಿಷಬ್ ಮೋಸದ ಬಗ್ಗೆ ಎಳೆ ಎಳೆಯಾಗಿ ಬಿಟ್ಟಿದ್ದಾಳೆ.
For More Updates Join our WhatsApp Group :




