ಆಳಂದ ಮತಗಳ್ಳತನ ಪ್ರಕರಣ.

ಆಳಂದ ಮತಗಳ್ಳತನ ಪ್ರಕರಣ.

SIT ಚಾರ್ಜ್​ಶೀಟ್  ರಾಜಕೀಯ ವಲಯದಲ್ಲಿ ಸಂಚಲನ.

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿರುವ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಚಾರ್ಜ್‌ಶೀಟ್‌ನಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹಾಗೂ ಅವರ ಪುತ್ರ ಹರ್ಷಾನಂದ್ ಗುತ್ತೆದಾರ್ ಸೇರಿ ಒಟ್ಟು ಏಳು ಮಂದಿಯ ಹೆಸರು ಉಲ್ಲೇಖಿಸಲಾಗಿದೆ. ಈ ಬೆಳವಣಿಗೆ ಕುರಿತು ಕಲಬುರಗಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹರ್ಷಾನಂದ್ ಗುತ್ತೆದಾರ್, ‘‘ಚಾರ್ಜ್‌ಶೀಟ್‌ನಲ್ಲಿ ಏನೆಲ್ಲಾ ಅಂಶಗಳಿವೆ ಎಂಬ ಬಗ್ಗೆ ನಮಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಸೋಮವಾರ ನೋಟಿಸ್ ನೀಡಿ ನಮ್ಮ ಹೇಳಿಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ನಮ್ಮ ಯಾವುದೇ ಪಾತ್ರವಿಲ್ಲ ಎಂಬುದನ್ನು ನಾವು ಸ್ಪಷ್ಟವಾಗಿ ಹೇಳಿದ್ದೇವೆ’’ ಎಂದು ಹೇಳಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಈ ಪ್ರಕರಣದ ಬಗ್ಗೆ ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಗೆದ್ದಿದ್ದಾರೆ. ಆದರೆ ಕಳೆದ ಎರಡು ವರ್ಷಗಳಿಂದ ಈ ಪ್ರಕರಣದಲ್ಲಿ ಯಾವುದೇ ಪ್ರಗತಿ ಆಗಿರಲಿಲ್ಲ. ಇದೀಗ ಸರ್ಕಾರ ತಮ್ಮದೇ ಇದ್ದ ಕಾರಣ ಅಧಿಕಾರಿಗಳನ್ನು ಬಳಸಿಕೊಂಡು ನನ್ನ ತಂದೆ ಹಾಗೂ ನನ್ನ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ ಎಂದು ಹರ್ಷಾನಂದ್ ಗುತ್ತೆದಾರ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಈ ವಿಚಾರವನ್ನು ಪ್ರಸ್ತಾಪಿಸಿದ ಬಳಿಕವೇ ಈ ಪ್ರಕರಣ ರಾಜಕೀಯವಾಗಿ ಬಳಕೆಯಾಗುತ್ತಿದೆ ಎಂದು ಆರೋಪಿಸಿದ ಹರ್ಷಾನಂದ್ ಗುತ್ತೆದಾರ್, ‘ರಾಹುಲ್ ಗಾಂಧಿ ಬಳಿ ಹತ್ತಿರವಾಗಲು ಮತ್ತು ಸಚಿವ ಸ್ಥಾನ ಪಡೆಯಲು ಬಿ.ಆರ್.ಪಾಟೀಲ್ ಈ ಪ್ರಕರಣವನ್ನು ಉಪಯೋಗಿಸಿಕೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *