8 ವರ್ಷಗಳಲ್ಲೇ ಮೊದಲ ಬಾರಿಗೆ 13.30 ಡಿಗ್ರಿ ಸೆಲ್ಸಿಯಸ್ಗಿಳಿದ ತಾಪಮಾನ.
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮೈಕೊರೆಯುವ ಚಳಿ ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು, ರಾಜ್ಯ ಹವಾಮಾನ ಇಲಾಖೆ ಶೀತಗಾಳಿ ಅಲರ್ಟ್ ನೀಡಿದೆ. ಬೆಂಗಳೂರಿನ ಎಚ್‌ಎಎಲ್ ಪ್ರದೇಶದಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದ್ದು, ಇಲಾಖೆಯ ಪ್ರಕಾರ ಕಳೆದ ಎಂಟು ವರ್ಷಗಳಲ್ಲಿ ದಾಖಲಾದ ಕನಿಷ್ಠ ತಾಪಮಾನ ಇದಾಗಿದೆ.
ಶನಿವಾರ ದಾಖಲಾಯ್ತು 13.30 ಡಿಗ್ರಿ ಸೆಲ್ಸಿಯಸ್ ತಾಪಮಾನ
ಭಾರತ ಹವಾಮಾನ ಇಲಾಖೆ (IMD)ಯ ಪ್ರಕಾರ, ಡಿಸೆಂಬರ್ 13ರಂದು ಬೆಂಗಳೂರಿನಲ್ಲಿ ಕನಿಷ್ಠ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಕಳೆದ ಎಂಟು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಅತ್ಯಂತ ಕಡಿಮೆ ಕನಿಷ್ಠ ತಾಪಮಾನವಾಗಿದೆ. 1883ರಲ್ಲಿ 8.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, 2011ರಲ್ಲಿ 12.8, 2013ರಲ್ಲಿ 13.6, 2016ರಲ್ಲಿ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆದರೀಗ ಬರೋಬ್ಬರಿ 8 ವರ್ಷಗಳ ನಂತರ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಮಕ್ಕಳು ಮತ್ತು ವೃದ್ಧರ ಬಗ್ಗೆ ಹೆಚ್ಚಿನ ಕಳಜಿ ವಹಿಸಿ
ಚಳಿ ಹಿನ್ನೆಲೆಯಲ್ಲಿ ಬೆಳಗಿನ ವಾಕಿಂಗ್‌ಗೆ ಹೋಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಲಾಲ್‌ಬಾಗ್‌ನಲ್ಲಿ ವಾಕರ್ಸ್ ಸಂಖ್ಯೆ ಶೇ.50ರಷ್ಟು ಇಳಿಕೆಯಾಗಿದೆ. ನಾಳೆಯಿಂದ ಚಳಿ ಪ್ರಮಾಣ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ. ಇನ್ನು ಚಳಿಯ ನಡುವೆಯೇ ಮಕ್ಕಳು ಸ್ವೆಟರ್, ಜಾಕೆಟ್, ಕ್ಯಾಪ್ ಧರಿಸಿ ಶಾಲೆಗಳಿಗೆ ತೆರಳುತ್ತಿದ್ದಾರೆ. ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ. ವೈದ್ಯರು ಚಳಿ ಸಮಯದಲ್ಲಿ ಬೆಳಗಿನ ವ್ಯಾಯಾಮ ತಪ್ಪಿಸಿ, ಬೆಚ್ಚನೆಯ ಉಡುಪು ಧರಿಸುವುದು ಹಾಗೂ ಬಿಸಿಯಾದ ಆಹಾರ ಸೇವಿಸಲು ಸಲಹೆ ನೀಡಿದ್ದಾರೆ. ಮಕ್ಕಳ ಮತ್ತು ವೃದ್ಧರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯವಾಗಿದೆ.
For More Updates Join our WhatsApp Group :




