ಪತಿಯ ಮೇಲೂ ಹ*ಲ್ಲೆ, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲೆ.
ಚೆನ್ನೈ: ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಆಕೆಯ ಪತಿ ಮೇಲೂ ಕೂಡ ಹಲ್ಲೆ ನಡೆಸಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಇಟ್ಟಿಗೆ ತಯಾರಿಕಾ ಘಟಕದಲ್ಲಿ ಕೆಲಸ ಮಾಡಲು ಅಸ್ಸಾಂನಿಂದ ಬಂದಿದ್ದರು. ನಂತರ ದಂಪತಿ ಕೆಲಸ ಬಿಟ್ಟು ಕೆಲಸ ಬಿಡಲು ನಿರ್ಧರಿಸಿದರು.
ದೂರಿನ ಪ್ರಕಾರ, ಅವರ ನಿರ್ಧಾರದ ಬಗ್ಗೆ ತಿಳಿದ ನಂತರ, ಪ್ರಮುಖ ಆರೋಪಿ ದಂಪತಿ ಹೊರಹೋಗದಂತೆ ತಡೆಯಲು ಇತರ ಇಬ್ಬರು ಪುರುಷರನ್ನು ಆಟೋದಲ್ಲಿ ಕರೆತಂದಿದ್ದ. ಸಂಬಳದಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಗಳನ್ನು ಹೊರಿಸಿ ಅವರ ಆ ಪ್ರದೇಶದಿಂದ ಹೊರಗೆ ಹೋಗದಂತೆ ತಡೆಯಲು ಪ್ರಯತ್ನಿಸಿದ್ದರು.
ಮಹಿಳೆಯನ್ನು ಆಟೋದಲ್ಲಿ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ಪತಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನವೆಂಬರ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮೂವರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ನಂತರ ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ವಿಶೇಷ ತಂಡಗಳನ್ನು ನಿಯೋಜಿಸಿದ್ದರು. ಮೂವರು ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
For More Updates Join our WhatsApp Group :




