DRI ದಾಳಿಗೆ ಬಹಿರಂಗವಾದ ಭಾರೀ ಗೊಬ್ಬರ ದಂಧೆ.
ನೆಲಮಂಗಲ: ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡ್ತಿರುವ ಯೂರಿಯಾದ ಅಭಾವದಿಂದಾಗಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿವೆ. ಕಿಲೋ ಮೀಟರ್ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ಮಂದಿ ಹಿಂದಿರುಗಿದ್ದಾರೆ. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗ್ತಿರೋ ಆತಂಕಕಾರಿ ವಿಷಯ ಬಹಿರಂಗವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನು DRI ಜಪ್ತಿ ಮಾಡಿದೆ.
ದಾಳಿಯ ವೇಳೆ ಗೆಜ್ಜಗದಹಳ್ಳಿಯಲ್ಲಿ 2 ಸಾವಿರ ಕೆಜಿ ಯೂರಿಯಾವನ್ನು DRI ವಶಕ್ಕೆ ಪಡೆದಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್ ಬಾಡಿಗೆಗೆ ಪಡೆದಿದ್ದರು.ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ DRI ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡ್ತಿದ್ದ 45 ಕೆಜಿ ತೂಕದ ಯೂರಿಯಾವನ್ನು ಶೆಡ್ಗಳಿಗೆ ತಂದು ದಾಸ್ತಾನು ಮಾಡಲಾಗ್ತಿತ್ತು. ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡ್ತಿದ್ದರು.
For More Updates Join our WhatsApp Group :




