ಗೃಹಲಕ್ಷ್ಮಿ ವಿಚಾರದಲ್ಲಿ ಗೊಂದಲ.

ಗೃಹಲಕ್ಷ್ಮಿ ವಿಚಾರದಲ್ಲಿ ಗೊಂದಲ.

ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್.

ಬೆಳಗಾವಿ : ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿ ವಿರೋಧ ಪಕ್ಷಗಳ ತೀವ್ರ ಟೀಕೆ, ವಿರೋಧಕ್ಕೆ ಗುರಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬುಧವಾರ ಸದನದಲ್ಲಿ ಸ್ಪಷ್ಟನೆ ನೀಡಿದರು. ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡ ಅವರು, ತನಗೆ ಜವಾಬ್ದಾರಿಯ ಅರಿವಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಈ ವಿಷಯವನ್ನು ಆದಷ್ಟು ಶೀಘ್ರದಲ್ಲಿ ಪರಿಹರಿಸುವುದಾಗಿ ಹೇಳಿದ್ದಾರೆ. ಹಣವನ್ನು ಬೇರೆ ಕಡೆಗೆ ವರ್ಗಾಯಿಸಲಾಗಿಲ್ಲ ಅಥವಾ ಯಾವುದೇ ದುರುಪಯೋಗವಾಗಿಲ್ಲ ಎಂದು ಸಚಿವೆ ಸ್ಪಷ್ಟಪಡಿಸಿದರು. ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವುದಾಗಿ ಅವರು ತಿಳಿಸಿದರು. ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಲಕ್ಷ್ಮೀ ಹೇಳಿದರು.

ಅಷ್ಟರಲ್ಲಿ ಅರವಿಂದ ಬೆಲ್ಲದ್ ಸೇರಿದಂತೆ ಪ್ರತಿಪಕ್ಷದ ನಾಯಕರು ಕ್ಷಮೆಗೆ ಆಗ್ರಹಿಸಿದರು. ಇದೇ ವೇಳೆ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *