ಡಿನ್ನರ್ ಮೀಟಿಂಗ್ ನೆಪದಲ್ಲಿ CM ಬಣದಿಂದ ಶಕ್ತಿ ಪ್ರದರ್ಶನ.

ಡಿನ್ನರ್ ಮೀಟಿಂಗ್ ನೆಪದಲ್ಲಿ CM ಬಣದಿಂದ ಶಕ್ತಿ ಪ್ರದರ್ಶನ.

ಡಿನ್ನರ್​​ ಮೀಟಿಂಗ್ ಬಳಿಕ ಕಾಂಗ್ರೆಸ್​​ ಪಾಳಯದಲ್ಲಿ ಮತ್ತೆ ಬಣ ಬಡಿದಾಟ ಆರಂಭ.

ಬೆಳಗಾವಿ : ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ನಡುವೆ ಅಧಿಕಾರ ಹಂಚಿಕೆ ವಿವಾದ ಹೈಕಮಾಂಡ್​​ ಅಂಗಳ ತಲುಪಿದ ಬೆನ್ನಲ್ಲೇ ರಾಜ್ಯದಲ್ಲಿ ನಡೆಯುತ್ತಿದ್ದ ರಾಜಕೀಯ ವಾಗ್ಯುದ್ಧಕ್ಕೆ ಕೊಂಚ ಬ್ರೇಕ್​​ ಬಿದ್ದಿತ್ತು. ಆದರೆ ಬೆಳಗಾವಿ ಅಧಿವೇಶನದ ಹೊತ್ತಲ್ಲೇ ಡಿಸಿಎಂ ಡಿಕೆಶಿ ಆಯೋಜಿಸಿದ್ದ ಡಿನ್ನರ್​​ ಮೀಟಿಂಗ್ ಬಳಿಕ ಕಾಂಗ್ರೆಸ್​​ ಪಾಳಯದಲ್ಲಿ ಮತ್ತೆ ಬಣ ಬಡಿದಾಟ ಆರಂಭವಾಗಿದೆ. ಡಿಕೆಶಿಗೆ ಕೌಂಟರ್​​ ಎಂಬಂತೆ ಸಿಎಂ ಸಿದ್ದರಾಮಯ್ಯ ಆಪ್ತ ಬಣದ ಪ್ರಭಾವಿ ನಾಯಕ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ ಮೀಟಿಂಗೇ ಇದಕ್ಕೆ ಸಾಕ್ಷಿ.

ಬೆಳಗಾವಿ ಅಧಿವೇಶನ ಸಂದರ್ಭದಲ್ಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಮತ್ತೊಂದು ಡಿನ್ನರ್ ಸಭೆ ನಡೆದಿದೆ. ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಊಟದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಬಹುತೇಕ ಶಾಸಕರು ಒಟ್ಟಿಗೆ ಸೇರಿದ್ದಾರೆ. ಸುಮಾರು 36 ಮಂದಿ ಶಾಸಕರು ಡಿನ್ನರ್​​ ಮೀಟಿಂಗ್​​ನಲ್ಲಿ ಭಾಗಿಯಾಗಿದ್ದು, ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಕೂಡ ಇದರಲ್ಲಿ ಭಾಗಿಯಾಗಿರೋದು ವಿಶೇಷವಾಗಿತ್ತು. ನಮ್ಮ ಜೊತೆ ಶಾಸಕರ ಬಲ ಇದೆ ಎಂದು ತೋರಿಸಲು ಡಿನ್ನರ್ ಆಯೋಜಿಸಿದ್ದ ಡಿ.ಕೆ. ಶಿವಕುಮಾರ್​ಗೆ ಕೌಂಟರ್ ಎನ್ನುವಂತೆ ಸತೀಶ್ ಜಾರಕಿಹೊಳಿ ನೆತೃತ್ವದಲ್ಲಿ ಮತ್ತೊಂದು ಬಣ ಒಟ್ಟಾಗಿರೋದು ಬೇರೆಯದ್ದೇ ಸಂದೇಶ ರವಾನಿಸಿದೆ. ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಕಾಂಗ್ರೆಸ್​​ ವರಿಷ್ಠರು ಕೂಡ ಚರ್ಚೆ ನಡೆಸುತ್ತಿದ್ದು, ಸಾಧಕ ಮತ್ತು ಬಾಧಕಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಹೊತ್ತಲ್ಲಿ ರಾಜ್ಯ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು, ಹೈಕಮಾಂಡ್​​ಗೆ ಸಂದೇಶ ರವಾನಿಸುವ ನಾಯಕರ ಯತ್ನ ಎಂಬ ಮಾತುಗಳೂ ಕೇಳಿಬಂದಿವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *