ನಂಜನಗೂಡು ಬಳಿ ಭಾರೀ ಅನಾಹುತ ತಪ್ಪಿತು.
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.
ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ, ಬೆಂಕಿಗೆ ಬಸ್ ಆಹುತಿಯಾಗಿದೆ. ಈ ಬಗ್ಗೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
For More Updates Join our WhatsApp Group :




