ಮನೆ ತುಂಬಾ ಹರಿದಿದ್ದ ನೆತ್ತರು ಯಾರದ್ದು?
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್ಎಸ್ಎಲ್ ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್ರೂಂ, ಟಿವಿ ಹಾಗೂ ಫ್ಯಾನ್ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ ಸೃಷ್ಟಿಸಿತ್ತು. ಮೊದಲಿಗೆ ಅದು ಯಾವುದೋ ಪ್ರಾಣಿಯ ರಕ್ತವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಪ್ರಾಥಮಿಕ ತನಿಖೆಯಲ್ಲೇ ಅದು ಮನುಷ್ಯನ ರಕ್ತ ಎಂಬುದು ಗೊತ್ತಾಗಿತ್ತು.
ಎಫ್ಎಸ್ಎಲ್ ವರದಿಯಿಂದ ಬಯಲಾಯ್ತು ರಹಸ್ಯ
ಈ ಪ್ರಕರಣದ ಗಂಭೀರತೆಯನ್ನು ಗಮನಿಸಿ ಬೆಸಗರಹಳ್ಳಿ ಠಾಣಾ ಪೊಲೀಸರು, ಎಫ್ಎಸ್ಎಲ್ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಬಂದಿರುವ ವರದಿಯಲ್ಲಿ, ಆ ರಕ್ತವು ಮನೆ ಮಾಲೀಕ ಸತೀಶ್ ಅವರದೇ ಎಂದು ಉಲ್ಲೇಖಿಸಲಾಗಿದೆ.
For More Updates Join our WhatsApp Group :




