ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯ ಕ್ರೂರ ಹ*.

ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯ ಕ್ರೂರ ಹ*.

ಕಣ್ಣಿಗೆ ಖಾರದಪುಡಿ ಎರಚಿದ ಆರೋಪ; ಪೋಷಕರ ಆಕ್ರೋಶ.

ಬಾಗಲಕೋಟೆ : ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ. ದೀಪಕ್ ರಾಠೋಡ್​​(16) ಹಲ್ಲೆಗೊಳಗಾದ ಬುದ್ಧಿಮಾಂದ್ಯ ಬಾಲಕ. ಮಹಾರಾಷ್ಟ್ರ ಮೂಲದ ಶಿಕ್ಷಕ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಮಾಲಿನಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದಾರೆ. ಹಲ್ಲೆಯನ್ನ ಪ್ರಶ್ನಿಸಲು ಬಂದ ಪೋಷಕರಿಗೆ ಶಿಕ್ಷಕ ದಂಪತಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಶಿಕ್ಷಕ ಅಕ್ಷಯ್ ಮತ್ತು ಅವರ ಪತ್ನಿ ಮಾಲಿನಿಯಿಂದ ಮಾತ್ರವಲ್ಲದೆ ಸಹ ಶಿಕ್ಷಕ ವಿಶಾಲ್ ಪಾಟೀಲ್​ನಿಂದಲೂ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಸದ್ಯ ಬುದ್ಧಿಮಾಂದ್ಯ ಶಾಲೆಯ ಮುಂದೆ ಪೋಷಕರು ಜಮಾಯಿಸಿದ್ದಾರೆ. ಈ ನೀಚ ಶಿಕ್ಷಕ ದಂಪತಿ ಕೃತ್ಯಕ್ಕೆ ಮಕ್ಕಳ ಪೋಷಕರು ಕಣ್ಣೀರು ಹಾಕಿದ್ದು, ಇವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಶಿಕ್ಷಕ ದಂಪತಿಯನ್ನ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *