ಚಳಿಗಾಲದಲ್ಲಿ ಹೃದಯಾ*ತ ತಪ್ಪಿಸಲು ಈ 3 ಪರೀಕ್ಷೆ ಕಡ್ಡಾಯ!

ಚಳಿಗಾಲದಲ್ಲಿ ಹೃದಯಾ*ತ ತಪ್ಪಿಸಲು ಈ 3 ಪರೀಕ್ಷೆ ಕಡ್ಡಾಯ!

ಲಿಪಿಡ್ ಪ್ರೊಫೈಲ್, ಬಿಪಿ ಟೆಸ್ಟ್, ಇಸಿಜಿ — ಈ ಜಾಗೃತಿಯೊಂದಿಗೆ ಆರೋಗ್ಯ ಕಾಪಾಡಿ.

ಚಳಿಗಾಲದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು. ಮಾತ್ರವಲ್ಲ, ಹೃದಯಾಘಾತದ ಪ್ರಕರಣಗಳನ್ನೂ ಕೂಡ ಕಡಿಮೆ ಮಾಡಬಹುದು. ಹಾಗಾದರೆ ಚಳಿಗಾಲದಲ್ಲಿ ಅಗತ್ಯವಾಗಿ ಮಾಡಬೇಕಾದ ಟೆಸ್ಟ್ ಗಳು ಯಾವವು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೆಹಲಿಯ ಅಪೋಲೋ ಆಸ್ಪತ್ರೆಯ ಹೃದ್ರೋಗ ವಿಭಾಗದ ಡಾ. ವರುಣ್ ಬನ್ಸಾಲ್ ಅವರು, ಚಳಿಗಾಲದಲ್ಲಿ ತಪ್ಪದೆ ಮಾಡಬೇಕಾದ ಕೆಲವು ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಲಿಪಿಡ್ ಪ್ರೊಫೈಲ್ ಪರೀಕ್ಷೆ

ಈ ಪರೀಕ್ಷೆಯು ದೇಹದಲ್ಲಿನ ಲಿಪಿಡ್‌ಗಳ ಮಟ್ಟವನ್ನು ತಿಳಿಸುತ್ತದೆ. ಆ ಮೂಲಕ, LDL (ಕೆಟ್ಟ ಕೊಲೆಸ್ಟ್ರಾಲ್), HDL (ಉತ್ತಮ ಕೊಲೆಸ್ಟ್ರಾಲ್) ಮತ್ತು ಟ್ರೈಗ್ಲಿಸರೈಡ್‌ಗಳನ್ನು ಕಂಡುಹಿಡಿಯಬಹುದು. ಈ ಮಟ್ಟಗಳು ದೇಹದಲ್ಲಿನ ಪ್ರಮಾಣಿತ ಶ್ರೇಣಿಗಿಂತ ಹೆಚ್ಚಿದ್ದರೆ, ಅದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಂದರ್ಥ.

ಬಿಪಿ ಟೆಸ್ಟ್ (ರಕ್ತದೊತ್ತಡದ ಮೇಲ್ವಿಚಾರಣೆ)

ರಕ್ತವನ್ನು ಪಂಪ್ ಮಾಡಲು ಹೃದಯವು ಎಷ್ಟು ಒತ್ತಡವನ್ನು ಬಳಸುತ್ತಿದೆ ಎಂಬುದನ್ನು ಈ ಪರೀಕ್ಷೆಯು ತೋರಿಸುತ್ತದೆ. ಚಳಿಗಾಲದಲ್ಲಿ ಹೃದಯದ ನಾಳಗಳು ಸಂಕುಚಿತಗೊಳ್ಳುವುದರಿಂದ ಈ ಸಮಯದಲ್ಲಿ ಈ ಪರೀಕ್ಷೆ ಮಾಡಿಸುವುದು ಬಹಳ ಒಳ್ಳೆಯದು. ಅಧಿಕ ರಕ್ತದೊತ್ತಡ ಹೊಂದಿರುವವರು ಖಂಡಿತವಾಗಿಯೂ ಈ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು.

ಇಸಿಜಿ

ಈ ಪರೀಕ್ಷೆಯು ಹೃದಯ ಬಡಿತ, ಹೃದಯ ಸ್ನಾಯುಗಳ ಬಲ ಮತ್ತು ಹೃದಯ ಸಂಬಂಧಿ ತೊಂದರೆಗಳನ್ನು ಬಹಿರಂಗಪಡಿಸುತ್ತದೆ. ವ್ಯಕ್ತಿಗೆ ಪದೇ ಪದೇ ಎದೆ ನೋವು ಬರುತ್ತಿದ್ದರೆ ಅವರು ಈ ಪರೀಕ್ಷೆಯನ್ನು ಖಂಡಿತವಾಗಿಯೂ ಮಾಡಬೇಕು.

ಯಾವ ಸಮಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತದೆ?

ಡಾ. ಬನ್ಸಾಲ್ ಹೇಳುವ ಪ್ರಕಾರ, ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತವೆ. ಅದರಲ್ಲಿಯೂ ಬೆಳಿಗ್ಗೆ 4 ರಿಂದ 6 ಗಂಟೆಯ ನಡುವೆ, ಈ ಅಪಾಯ ಹೆಚ್ಚಾಗಿ ಕಂಡುಬರುತ್ತವೆ. ಈ ಸಮಯದಲ್ಲಿ, ಬೆಳಗಿನ ತಾಪಮಾನ ಕಡಿಮೆ ಇರುವುದರಿಂದ ಇದು ಹೃದಯದ ನಾಳಗಳ ಮೇಲೆ ಪರಿಣಾಮ ಬೀರುತ್ತದೆ, ಹಾಗಾಗಿ ಇದು ಹೃದಯಾಘಾತಕ್ಕೆ ಕಾರಣವಾಗುತ್ತದೆ. ಇದನ್ನು ತಡೆಯಲು ಈ ಮೂರು ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. ಇವುಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಂದರೆ, ಆ ಆಧಾರದ ಮೇಲೆ ಇತರ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಪರೀಕ್ಷೆಯನ್ನು ಯಾರು ಮಾಡಿಸಿಕೊಳ್ಳಲೇಬೇಕು?

  • 45 ವರ್ಷಕ್ಕಿಂತ ಮೇಲ್ಪಟ್ಟವರು
  • ಅಧಿಕ ರಕ್ತದೊತ್ತಡ ಇರುವವರು
  • ಈಗಾಗಲೇ ಕೆಲವು ರೀತಿಯ ಹೃದಯ ಸಂಬಂಧಿ ಕಾಯಿಲೆ ಇರುವವರು
  • ಅತಿಯಾಗಿ ಧೂಮಪಾನ ಮಾಡುವವರು

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *