ಪ್ರಿಯಕರನ ಕೃತ್ಯ; ಮಹಿಳೆಯ ಕತ್ತು ಸೀಳಿ ಕೊ*.
ಬೆಂಗಳೂರು: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಮದುವೆಯಾಗದೇ ಒಂಟಿಯಾಗಿದ್ದ ಸ್ಟಾಫ್ ನರ್ಸ್.
39 ವರ್ಷವಾದರೂ ಮದುವೆಯಾಗದೆ ಒಂಟಿಯಾಗಿದ್ದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಮಾರಸ್ವಾಮಿ ಲೇಔಟ್ನಲ್ಲಿ ತಮ್ಮ ಸ್ನೇಹಿತೆಯೊಂದಿಗೆ ಬಾಡಿಗೆ ಮನೆ ಮಾಡಿಕೊಂಡಿದ್ದರು. ಡಿಸೆಂಬರ್ 24ರಂದು ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಆ ದಿನ ರಾತ್ರಿ ಮಮತಾ ಒಬ್ಬರೇ ಮನೆಯಲ್ಲಿದ್ದರು. ಇದೇ ಸಮಯಕ್ಕೆ ಕಾದು ಕುಳಿತಿದ್ದ ಆರೋಪಿ ಸುಧಾಕರ್, ರಾತ್ರೋ ರಾತ್ರಿ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ಡಿಸೆಂಬರ್ 25ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಮಾಹಿತಿ ದೊರಕುತ್ತಿದ್ದಂತೆ , ಕುಮಾರಸ್ವಾಮಿ ಲೇಔಟ್ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
For More Updates Join our WhatsApp Group :




